ಕಲಬುರಗಿ: ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದಂತೆ ನೀರಿನ ದಾಹ ಉಲ್ಬಣಿಸುತ್ತದೆ. ನಗರಕ್ಕೆ ಬರುವ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯಲು ನೀರಿನ ಸಮಸ್ಯೆ ಆಗುತ್ತದೆ. ಇದನ್ನು ಅರಿತು ನಗರ ಮತ್ತು ಬೇರೆ ಪ್ರದೇಶಗಳಿಂದ ಆಗಮಿಸುವ ಜನರ ಕುಡಿಯುವ ನೀರಿನ ದಾಹ ತಣಿಸುಲು ಕನ್ನಡ ಭವನದ ಮಹಾದ್ವಾರದ ಮುಂಭಾಗದಲ್ಲಿ ಅರವಟ್ಟಿಗೆ ಇಡುವ ಮೂಲಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತೊಂದು ಮಾನವೀಯತೆ ಮೆರೆಯುವ ಕಾರ್ಯ ಮಾಡಿದಂತಾಗಿದೆ.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಜಗತ್ತಿನಲ್ಲಿ ಅನ್ನದಾನ, ರಕ್ತದಾನ, ನೇತ್ರದಾನ, ಅಂಗಾಂಗದಾನ ಎಷ್ಟು ಮುಖ್ಯವಾಗಿಯೋ ಅಷ್ಟೇ ದಾನಗಳಲ್ಲಿ ಶ್ರೇಷ್ಠದಾನ ಅಂದರೆ ನೀರಿನ ದಾನ ಅದಕ್ಕೆ ಜೀವಜಲ ಅನ್ನೋದೋ ಪ್ರಾಣಿ ಪಕ್ಷಿಗಳಿಗೂ ನಿರು ಅತ್ಯಾಮೂಲ್ಯವಾದದ್ದು ಎಂದು ಹೇಳಿದರು.
ಮುಂದುವರೆದು ಮಾತನಾಡಿದ ಅವರು, ಹಳ್ಳಿಯಿಂದ ನಾನಾ ಕೆಲಸಗಳಿಗೆ ಪಟ್ಟಣಕ್ಕೆ ಬರುವ ಬಡ ಜನರಿಗೆ ಹೋಟೆಲ್‍ನಲ್ಲಿ ಕುಡಿಯುವ ನೀರನ್ನು ಉಚಿತವಾಗಿ ನೀಡುವುದು ಕಷ್ಟ. ಆದ್ದರಿಂದ ನೀರಿನ ಮಹತ್ವ ಅರಿತು ಬೇಸಿಗೆಯಲ್ಲಿ ಬಿಸಿಲಿನ ದಾಹ ನೀಗಿಸಲು ಅರವಟ್ಟಿಗೆಗಳನ್ನು ಇರಿಸಲಾಗಿದೆ ಎಂದು ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಜಯಂತೋತ್ಸವ ಸಮಿತಿ ಅಧ್ಯಕ್ಷ ದಿನೇಶ ದೊಡ್ಮನಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಮಹಿಳಾ ಘಟಕದ ನಗರಾಧ್ಯಕ್ಷೆ ಡಾ. ನಾಗವೇಣಿ ಪಾಟೀಲ ಸಾರ್ವಜನಿಕರಿಗೆ ನೀರುವ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಕಸಾಪ ದ ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ಕಲ್ಯಾಣಕುಮಾರ ಶೀಲವಂತ, ರಾಜೇಂದ್ರ ಮಾಡಬೂಳ, ಡಾ. ಕೆ.ಗಿರಿಮಲ್ಲ, ಪ್ರಮುಖರಾದ ಬಿ.ಎಂ.ಪಾಟೀಲ ಕಲ್ಲೂರ, ಲತಾ ಬಿಲಗುಂದಿ, ಸಂತೋಷ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ಸುರೇಶ ದೇಶಪಾಂಡೆ, ಶಿವಕುಮಾರ ಸಿ.ಎಚ್., ಸುರೇಶ, ರವಿ ಹಾಗರಗಿ, ಶಿವಲಿಂಗ ಟೆಂಗಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…