ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ರವರ ಶಿಫಾರಸ್ಸು ಮೇರೆಗೆ ಗುಲಬರ್ಗಾ ದಕ್ಷಿಣ” ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಹುಲಿಗೆಪ್ಪ ಕನಕಗಿರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಅಶೋಕ ವೀರನಾಯಕ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಹಗಲಿರುಳು ಶ್ರಮ ವಹಿಸುತ್ತಿರೆಂದು ನಂಬಿ ಕಾಂಗ್ರೆಸ್ ಪಕ್ಷದ ಈ ಮಹತ್ವದ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ. ತಾವು ಈ ಜವಾಬ್ದಾರಿಯನ್ನು ಹೊತ್ತುಕೊಂಡು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರ ಸಹಯೋಗದೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಸಂಘಟನೆಯಲ್ಲಿ ಭಾಗಿಯಾಗಿ ಈ ದಿಸೆಯಲ್ಲಿ ತಾವು ಹೆಚ್ಚಿನ ಯಶಸ್ಸು ಸಾಧಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.