ಸಾರ್ವತ್ರಿಕ ಚುನಾವಣೆ: ರಾಜಕೀಯ ಪಕ್ಷದ ಮುಖಂಡರೊಂದಿಗೆ DC ಸಭೆ

0
15

ಕಲಬುರಗಿ; ಕರ್ನಾಟಕ ವಿಧಾನ ಸಭಾ ಚುನಾವಣೆ-2023 ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಯಾಗಿದ್ದು ಯಾವುದೇ ಅಕ್ರಮಗಳು ಕಂಡು ಬಂದಲ್ಲಿ ಗಮನಕ್ಕೆ ತರಬೇಕೆಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ ಗುರುಕರ್ ಅವರು ರಾಜಕೀಯ ಪಕ್ಷಗಳಿಗೆ ತಿಳಿಸಿದರು.

ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.
ಒಬ್ಬ ಅಭ್ಯರ್ಥಿಗೆ 40 ಲಕ್ಷ ರೂಪಾಯಿ ಚುನಾವಣೆ ವೆಚ್ಚಮಿತಿ ನಿಗಧಿಪಡಿಸಲಾಗಿದೆ ಎಂದ ಅವರು ಅಭ್ಯರ್ಥಿಯ ಫೋಷಣೆ ಮುನ್ನ ಸಭೆ-ಸಮಾರಂಭಗಳು ನಡೆದಲ್ಲಿ ಇವುಗಳ ಖರ್ಚು ವೆಚ್ಚವನ್ನು ಆಯಾ ರಾಜಕೀಯ ಪಕ್ಷಗಳ ಲೆಕ್ಕಕ್ಕೆ ಹಾಕಲಾಗುವುದು. ಖರ್ಚು ವೆಚ್ಚ ನಿಗಾಕ್ಕಾಗಿ ನೋಡಲ್ ಅಧಿಕಾರಿಗಳನ್ನು ಈಗಾಗಲೇ ನೇಮಕ ಮಾಡಲಾಗಿದೆ ಎಂದರು.

Contact Your\'s Advertisement; 9902492681

ಜಿಲ್ಲೆಯಲ್ಲಿನ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ಇನ್ನಿತರ ಸಾಮಾನ್ಯ ಸಭೆಗಳನ್ನು ಚುನಾವಣೆ ನೀತಿ ಸಂಹಿತೆ ಮುಕ್ತಾಯವಾಗುವವರೆಗೆ ನಿಷೇಧಿಸಲಾಗಿದೆ ಎಂದರು.

ಈ ಚುನಾವಣೆಯ ಅತ್ಯಂತ ಶಾಂತ ರೀತಿಯಿಂದ ಮುಕ್ತವಾಗಿ, ನ್ಯಾಯ ಸಮ್ಮತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವಲ್ಲಿ ಚುನಾವಣಾ ಮಾದರಿ ನೀತಿ ಸಹಿಂತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದರು.

ವೇದಿಕೆ ಮೇಲೆ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಸೇರಿದಂತೆ ಸಭೆಯಲ್ಲಿ ಎಲ್ಲಾ ರಾಜಕೀಯ ಮುಖಂಡ ಪಕ್ಷದವರು ಭಾಗವಹಿಸಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here