ಬಿಸಿ ಬಿಸಿ ಸುದ್ದಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆ ; ಆಯುಧಗಳ ಠೇವಣಿ ಮಾಡಲು DC ಸೂಚನೆ

ಕಲಬುರಗಿ; ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಾದ್ಯಂತ ಹೊಂದಿರುವ ಆಯುಧ ಲೈಸೆನ್ಸ್‍ದಾರರ ಆಯುಧ (ಫೈರ್ ಆಮ್ರ್ಸ್)ಗಳನ್ನು (ರಾಷ್ಟ್ರೀಕೃತ ಬ್ಯಾಂಕ್ ಮತ್ತು ರಿಸರ್ವ್ ಬ್ಯಾಂಕ ಅವರಿಂದ ಅನುಮೋದಿತ ಶೆಡ್ಯೂಲ್ ಬ್ಯಾಂಕುಗಳ ಸೆಕ್ಯೂರಿಟಿ ಗಾರ್ಡಗಳ ಆಯುಧಗಳನ್ನು ಹೊರತುಪಡಿಸಿ) ತಕ್ಷಣದಿಂದಲೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಯಶವಂತ ವಿ. ಗುರುಕರ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ಭಾರತೀಯ ಆಯುಧ ಕಾಯ್ದೆ 1959ರ ಕಲಂ(4), ಕಲಂ (21), 24ಎ(1)ರನ್ವಯ ಹೊರಡಿಸಿರುವ ಈ ಆದೇಶದಲ್ಲಿ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಅಂದರೆ ದಿ:20-05-2023ರ ವರೆಗೆ ಸಿ.ಆರ್.ಪಿ.ಸಿ. 1973 ಕಲಂ 144 ರಡಿ ಯಾವುದೇ ಲೈಸೆನ್ಸ್‍ದಾರರು ತಮ್ಮ ಆಯುಧವನ್ನು ಚುನಾವಣೆ ಸ್ಥಳ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೊತ್ತು ಒಯ್ಯುವುದನ್ನು ಮತ್ತು ಪ್ರದರ್ಶನ ಮಾಡುವುದನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

15 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago