ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು ಖೂಬಾ ಅವರು.
ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು.
ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…