ಕಲಬುರಗಿ: ವಿಧಾನಸಭೆ ಚುನಾವಣೆ 9 ಕ್ಷೇತ್ರಗಳಿಗೆ 123 ಫ್ಲೈಯಿಂಗ್ ಸ್ಕ್ವಾಡ್ ತಂಡ ರಚನೆ

0
14

ಕಲಬುರಗಿ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟಾಗಿ ಪಾಲನೆ ಮಾಡಲು ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 123 ಫ್ಲೈಯಿಂಗ್ ಸ್ಕ್ವಾಡ್ ತಂಡ ರಚಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಆದೇಶಿಸಿದ್ದಾರೆ.

ಅಫಜಲಪೂರ, ಜೇವರ್ಗಿ, ಚಿತ್ತಾಪುರ, ಸೇಡಂ, ಚಿಂಚೋಳಿ, ಆಳಂದ, ಗುಲಬರ್ಗಾ ಗ್ರಾಮೀಣ, ಗುಲಬರ್ಗಾ ದಕ್ಷಿಣ, ಗುಲಬರ್ಗಾ ಉತ್ತರ ಕ್ಷೇತ್ರಗಳಿಗೆ ಫ್ಲೈಯಿಂಗ್ ಸ್ಕ್ವಾಡ್ ತಂಡ ರಚಿಸಿ ಅವರ ಜವಾಬ್ದಾರಿಗಳನ್ನು ತಿಳಿಸಿದ್ದಾರೆ.

Contact Your\'s Advertisement; 9902492681

ತಂಡದ ಜವಾಬ್ದಾರಿಗಳು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ದೂರುಗಳಿಗೆ ಸ್ಪಂದಿಸುವುದು, ಮತದಾರರಿಗೆ ಬೆದರಿಕೆ ನೀಡುವ, ಸಮಾಜ ಘಾತುಕ ಶಕ್ತಿಗಳ ಚಲವಲನ ಮೇಲೆ ನಿಗಾ ವಹಿಸುವುದು. ಮತದಾರರಿಗೆ ಆಮಿಷ ಒಡ್ಡಲು ಅಕ್ರಮವಾಗಿ ಸಾಗುವ ಹಣ, ವಸ್ತುಗಳನ್ನು ವಶಕ್ಕೆ ಪಡೆಯುವುದು.

ಚುನಾವಣಾ ಖರ್ಚು ದೂರಿಗೆ ಸ್ಪಂದಿಸುವುದು ಮತ್ತು ಚುನಾವಣಾ ರ್ಯಾಲಿ, ಸಭೆ, ಸಮಾರಂಭಗಳನ್ನು ವಿ.ವಿ.ಟಿ ತಂಡದ ಸಹಾಯದೊಂದಿಗೆ ವಿಡಿಯೋಗ್ರಾಪಿ ಮಾಡುವುದು. ಕಾಲಕಾಲಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾಧಿಕಾರಿಗಳು, ಚುನಾವಣಾ ವೀಕ್ಷಕರ ಸೂಚನೆಗಳನ್ನು ಪಾಲಿಸುವುದರ ಜೊತೆಗೆ ದೈನಂದಿನ ವರದಿ ಸಲ್ಲಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here