ಚುನಾವಾಣೆಯಲ್ಲಿ ನಿಷ್ಪಕ್ಷ-ಶಾಂತಿಯುತವಾಗಿ ಕರ್ತವ್ಯ ನಿರ್ವಹಿಸಲು ಪೊಲೀಸ್‌ರಿಗೆ ಕರೆ

ಬೆಂಗಳೂರು;  ಕಾನೂನು ಸುವ್ಯವಸ್ಥೆ ಹಾಗೂ  ದಕ್ಷ ಆಡಳಿತದಲ್ಲಿ ಕರ್ನಾಟಕವು ದೇಶದಲ್ಲಿ ಮೊದಲ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಈ ಬಾರಿ ಉತ್ತಮ ಸೇವೆ ಸಲ್ಲಿಸಿದ 137 ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಸೇವೆ ಪದಕ ದೊರತಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮಾ ರವರು ತಿಳಿಸಿದರು.

ಪೊಲೀಸ್ ಧ್ವಜಾ ದಿನಾಚರಣೆ ಅಂಗವಾಗಿ ಕೋರಮಂಗಲದ ಕೆ.ಎಸ್.ಆರ್.ಪಿ ಫರೇಡ್ ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಕವಾಯುತ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಯಾವುದೇ ಕಳಂಕ ಬಾರದ ರೀತಿಯಲ್ಲಿ ನಿಷ್ಪಕ್ಷ-ನಿಷ್ಕಳಂಕ ಮತ್ತು ಶಾಂತಿಯುತವಾಗಿ ಸಾರ್ವಜನಿಕರ ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸುವುದು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು.

ಕರ್ನಾಟಕದ ಬೆಂಗಳೂರು ಸಿಲಿಕಾನ್ ಸಿಟಿಯಾಗಿದ್ದು ದೇಶ-ವಿದೇಶಗಳಿಂದ ಬಂಡವಾಳ ಹೂಡಿಕೆದಾರರು ಆಗಮಿಸುತ್ತಿದ್ದು, ಇದಕ್ಕೆ ಮುಖ್ಯ ಕಾರಣ ಇಲ್ಲಿನ ಕಾನೂನು ಸುವ್ಯವಸ್ಥೆ  ತುಂಬಾ ಉತ್ತಮ ಹಾಗೂ ಕಟ್ಟುನಿಟ್ಟಾಗಿರುವುದು ಎಂದರು.  ಇಲಾಖೆಯು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿರುವ ವಿಧಾನ, ವೃತ್ತಿಪರ ಕುಶಲತೆ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ನೇರ, ಸರಳ ಮತ್ತು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತದೆ ಎಂದರು. ಆಧುನಿಕ ತಂತ್ರಜ್ಞಾನವನ್ನು  ಅಳವಡಿಸಿಕೊಂಡು ಕಡಿಮೆ ಅವಧಿಯಲ್ಲಿ ಪ್ರಕರಣಗಳನ್ನು ಬಗೆಹರಿಸಲಾಗಿದೆ. ಸೈಬರ್ ಅಪರಾಧಗಳನ್ನು ಕಂಡುಹಿಡಿದು ದೂರುದಾರರಿಗೆ ನ್ಯಾಯ ದೊರಕಿಸಲಾಗುತ್ತಿದೆ ಎಂದರು.

ಏಪ್ರಿಲ್ ೦2ರಂದು ಪೊಲೀಸ್ ಧ್ವಜಾ ದಿನಾಚರಣೆಯನ್ನಾಗಿ ಆಚರಿಸಿ ಪೊಲೀಸ್ ಸೇವೆಯಲ್ಲಿ ಇರುವವರೆಲ್ಲರೂ ತಮ್ಮನ್ನು ಸೇವೆಗೆ ಪುನರ್ ಸಮರ್ಪಿಸಿಕೊಳ್ಳುವುದಲ್ಲದೆ ಈ ದಿನವನ್ನು ಪೊಲೀಸ್ ಕಲ್ಯಾಣ ದಿನವನ್ನಾಗಿ ಕೂಡ ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ನೆನಸಿ ಅವರ ಹಾಗೂ ಕುಟುಂಬದವರ ಬಗ್ಗೆ ಚಿಂತಿಸಲಾಗುತ್ತದೆ ಎಂದರು.  ಕೋವಿಡ್ ಸಂದರ್ಭದಲ್ಲಿ  ಹಗಲು-ರಾತ್ರಿ ಶ್ರಮವಹಿಸಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರಾಮಾಣಿಕ ಸೇವೆ ಗೈದಿರುವ ಪೊಲೀಸ್‌ರನ್ನು ಸ್ಮರಿಸಲಾಗುವುದು.

ಈ ಪೊಲೀಸ್ ಧ್ವಜಾ ದಿನಾಚರಣೆಯನ್ನು ನೈತಿಕವಾಗಿ ಬೆಂಬಲಿಸಿ ಪೊಲೀಸ್ ಧ್ವಜವನ್ನು ಸಾರ್ವಜನಿಕರು  ಹೆಚ್ಚಿನ ಸಂಖ್ಯೆಯಲ್ಲಿ  ಖರೀದಿಸಿ  ಅವರ ಪ್ರಾಮಾಣಿಕ ಸೇವೆಗೆ ಬೆಂಬಲ ನೀಡುವಂತೆ ತಿಳಿಸಿದರು.

ಡಿಜಿ ಐಜಿಪಿ ಪ್ರವೀಣ ಮಸೂದ್ ಅವರು ಸ್ವಾಗತಿಸಿ ಮಾತನಾಡಿ ೧೯೬೫ರಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಜಾರಿಯಾಗಿದ್ದು ಈ ನೆನಪಿಗಾಗಿ ಪೊಲೀಸ್ ಧ್ವಜಾ ಹಾಗೂ ಕಲ್ಯಾಣ ದಿನವನ್ನಾಗಿ ಆಚರಿಸಲಾಗುತ್ತಿದೆ. ಸೇವಾ ನಿರತ ಹಾಗೂ ನಿವೃತ್ತಿ ಸಿಬ್ಬಂದಿಗಳ ಸೇವೆ-ಸ್ಮರಣೆಗಾಗಿ ಹಣ ನಿಧಿ ಸಂಗ್ರಹವನ್ನು ಮಾಡಲಾಗುತ್ತಿದೆ. ಈ ಬಾರಿ 137 ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಸೇವೆ ಪದಕ ದೊರೆತಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ಪದಕಗಳನ್ನು ವಿತರಿಸಲಾಗಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಪೊಲೀಸ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಕೆ.ಎಸ್.ಆರ್.ಪಿ, ಸಿಎಆರ್, ಕೆಎಸ್‌ಐಎಸ್‌ಎಫ್, ರೈಲ್ವೆ, ಟ್ರಾಫಿಕ್ ಹಾಗೂ ಬಿಸಿಪಿ ಮಹಿಳಾ ತುಕಡಿ ಸೇರಿದಂತೆ ಶ್ವಾನದಳ ಮತ್ತು ಅಶ್ವದಳಗಳು ಭಾಗವಹಿಸಿದ್ದವು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420