ಬಿಸಿ ಬಿಸಿ ಸುದ್ದಿ

ಪ್ರವಾಹ ಸಂತ್ರಸ್ಥರಿಗೆ ಅಂಬೇಡ್ಕರ ಶಿಕ್ಷಣ ಸಂಸ್ಥೆಯಿಂದ 25 ಕ್ವಿಂಟಾಲ್ ಅಕ್ಕಿ ಹಾಗೂ ಇತರ ಆಹಾರ ಧಾನ್ಯ ವಿತರಣೆ ನೆರವು

ಸುರಪುರ: ಕೃಷ್ಣಾ ನದಿಯಲ್ಲಿ ಉಂಟಾದ ಪ್ರವಾಹದಿಂದ ಸಂತ್ರಸ್ಥರಾದ ತಾಲೂಕಿನ ವಿವಿಧ ಗ್ರಾಮಗಳ ನೆರೆ ಪೀಡಿತ ಗ್ರಾಮಸ್ಥರಿಗೆ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ ವಿದ್ಯಾವರ್ಧಕ ಸಂಘ ಶಿಕ್ಷಣ ಸಂಸ್ಥೆಯ ವತಿಯಿಂದ ಬುಧುವಾರದಂದು ನಗರದ ಕುಂಬಾರಪೇಟ ಗಂಜ್‌ನಲ್ಲಿರುವ ಪ್ರವಾಹ ಸಂತ್ರಸ್ಥರಿಗೆ ಆಶ್ರಯ ಕಲ್ಪಿಸಿರುವ ಗಂಜಿ ಕೇಂದ್ರಕ್ಕೆ ತೆರಳಿ ೨೫ ಕ್ವಿಂಟಾಲ್ ಅಕ್ಕಿ ಹಾಗೂ ಇತರ ದಿನಬಳಕೆಯ ಆಹಾರ ಧಾನ್ಯಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕ ರಾಜುಗೌಡ ಮಾತನಾಡಿ ಅಂಬೇಡ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಭೀಮಣ್ಣ ಬಿಲ್ಲವ್ ಹಾಗೂ ಸಂಸ್ಥೆಯ ಇತರರು ಕೃಷ್ಣಾ ನದಿಯ ಪ್ರವಾಹದಿಂದ ಸಂಕಷ್ಟಗೊಳಗಾದ ಜನರಿಗೆ ಅಕ್ಕಿ ಹಾಗೂ ಆಹಾರ ಧಾನ್ಯಗಳನ್ನು ವಿತರಿಸಿ ನೆರವು ನೀಡಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು, ತಮ್ಮ ಮನೆ, ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಹಾಗೂ ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದು ನಿಂತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಗೊಂಡು ಸಂಕಷ್ಟದಲ್ಲಿರುವ ಜನರಿಗೆ ಇತರೆ ಸಂಘ-ಸಂಸ್ಥೆಗಳು ನೆರವು ನೀಡಬೇಕು, ಅಂಬೇಡ್ಕರ ಶಿಕ್ಷಣ ಸಂಸ್ಥೆಯು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.

ಶಿಕ್ಷಣ ಸಂಸ್ಥೆಯ ಮುಖಂಡರಾದ ಭೀಮಣ್ಣ ಬಿಲ್ಲವ್ ಮಾತನಾಡಿ ಅಂಬೇಡ್ಕರ ಶಿಕ್ಷಣ ಸಂಸ್ಥೆಯು ಕಳೆದ ೪೦ ವರ್ಷಗಳಿಂದ ಸುರಪುರ, ರಂಗಂಪೇಟ, ಕಲಬುರಗಿ, ಹುಣಸಗಿ, ಕಕ್ಕೇರಾ, ಶಹಾಪುರ ಸೇರಿದಂತೆ ಅನೇಕ ಕಡೆಗಳಲ್ಲಿ ವಿವಿಧ ಶಾಲಾ-ಕಾಲೇಜುಗಳನ್ನು ಹಾಗೂ ವಸತಿ ನಿಲಯಗಳನ್ನು ನಡೆಸುತ್ತಿದ್ದು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕೆಲಸವನ್ನು ಕೈಗೊಳ್ಳುತ್ತಾ ಬಂದಿದ್ದು ಈಗ ನಮ್ಮ ತಾಲೂಕಿನಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹದಿಂದಾಗಿ ತೊಂದರೆಯಲ್ಲಿರುವ ಸಂತ್ರಸ್ಥರಿಗೆ ನೆರವು ನೀಡುವ ಸಂಕಲ್ಪ ಹೊಂದುವ ಮೂಲಕ ಅವರಿಗೆ ದಿನಬಳಕೆಗಾಗಿ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸುವ ಮೂಲಕ ಕೈಲಾದ ಮಟ್ಟಿಗೆ ಸಹಾಯ ಮಾಡುತ್ತಿದ್ದೇವೆ ಎಂದು ಹೇಳಿದರು, ಪ್ರವಾಹ ಸಂತ್ರಸ್ಥರು ಯಾವುದೇ ರೀತಿಯಲ್ಲಿ ಧೈರ್ಯ ಕಳೆದುಕೊಳ್ಳಬಾರದು, ಮುಂದಿನ ದಿನಗಳಲ್ಲಿ ನಿಮ್ಮ ಸಂಕಷ್ಟಕ್ಕೆ ಸರಕಾರ ನಿಮ್ಮ ನೆರವಿಗೆ ಬರುತ್ತದೆ ಎಂದು ಹೇಳಿದರು, ಸಂಘ-ಸಂಸ್ಥೆಗಳು ನೆರೆ ಪೀಡಿತ ಜನರಿಗೆ ನೆರವು ನೀಡುವುದು ಅವಶ್ಯಕ ಎಂದು ಹೇಳಿದರು.

ಈ ಸಂದರ್ಭದಲ್ಲಿ ನೆರೆ ಪೀಡಿತರಿಗೆ ವಿತರಿಸಲು ಸಂಸ್ಥೆಯ ವತಿಯಿಂದ ೨೫ ಕ್ವಿಂಟಾಲ್ ಸೋನಾ ಮಸೂರಿ ಅಕ್ಕಿ, ೧ ಕ್ವಿಂಟಾಲ್ ತೊಗರಿಬೇಳೆ, ೧೦೦ಲೀಟರ್ ಅಡುಗೆ ಎಣ್ಣೆ, ೧ಕ್ವಿಂಟಾಲ್ ಉಪ್ಪು ಹಾಗೂ ೫೦ಕಿಲೋ ಮೆಣಸಿನಕಾಯಿ ಖಾರದ ಪುಡಿಯನ್ನು ತಹಶೀಲ್ದಾರರಿಗೆ ನೀಡಲಾಯಿತು, ತಹಶೀಲ್ದಾರ ಸುರೇಶ ಅಂಕಲಗಿ, ಉದ್ದಿಮೆದಾರರಾದ ಗ್ಯಾನಚಂದ ಜೈನ, ಮಲ್ಲಿಕಾರ್ಜುನ ಬಿಲ್ಲವ್, ಅಂಬೇಡ್ಕರ ಶಿಕ್ಷಣ ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳ ಡಾ.ಮಲ್ಲಿಕಾರ್ಜುನ ಕುಲಕರ್ಣಿ ಗೌಡಗೇರ, ಡಾ.ಉಮಾದೇವಿ ದಂಡೋತಿ, ಗಂಗಾಧರ ರುಮಾಲ, ರೇಣುಕಾ ಕನಕಗಿರಿ, ಪರಶುರಾಮ ಚಾಮನಾಳ, ಕೆ.ಎಲ್.ಚವ್ಹಾಣ, ಮಾನಪ್ಪ ಬಾಚಿಮಟ್ಟಿ, ದಿಗಂಬರ್ ಬಾಬರೆ, ಅಬ್ದುಲ್ ರಹೀಮ ಸೇರಿದಂತೆ ಉಪ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago