ಕಲಬುರಗಿ ಗ್ರಾಮೀಣ, ಚಿತ್ತಾಪುರ ಮತಕ್ಷೇತ್ರ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಿ

0
69

ಕಲಬುರಗಿ: 2023 ರ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಗ್ರಾಮೀಣ ಹಾಗೂ ಚಿತ್ತಾಪುರ ಮತಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಪಕ್ಷದವರು ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಚಳವಳಿಯ ರಾಜ್ಯ ಸಂಚಾಲಕ ರವಿ ಮದನಕರ ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಒಟ್ಟು 41 ವಿಧಾನಸಭಾ ಮತಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ 8 (ಮೀಸಲು) ಮತಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಯ ಬಲಗೈ / ಹೊಲೆಯ/ಛಲವಾದಿ ಸಮುದಾಯಕ್ಕೆ ಬಿಜೆಪಿ ಪಕ್ಷವು ಇಲ್ಲಿಯವರೆಗೆ ಯಾವುದೇ ರೀತಿಯ ಅವಕಾಶಗಳನ್ನು ನೀಡಿಲ್ಲ, ಪಕ್ಷದವರು ಬಲಗೈ ಸಮುದಾಯವನ್ನು ಕಡೆಗಣಿಸುತ್ತಿರುವುದನ್ನು ಬಲಗೈ, ಹೊಲೆಯ, ಛಲವಾದಿ ಸಮುದಾಯಕ್ಕೆ ಬಹಳ ಅಸಮಾಧಾನವಿದೆ ಎಂದು ದಲಿತ ಬಲಗೈ ಸಂಘಟನೆಗಳ ಮುಖಂಡರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಧಾನ ವ್ಯಕ್ತಪಡಿಸಿದರು.

Contact Your\'s Advertisement; 9902492681

ಕಲ್ಯಾಣ ಕರ್ನಾಟಕದ 41 ವಿಧಾನಸಭಾ ಮತಕ್ಷೇತ್ರಗಳಲ್ಲಿ ನಮ್ಮ ಸಮಾಜವು ನಿರ್ಣಾಯಕವಾಗಿದೆ.
ಕಳೆದ ಹಲವಾರು ಸಾರ್ವತ್ರಿಕ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಮುದಾಯವು ಬಿಜೆಪಿಗೆ ಬೆಂಬಲಿಸುತ್ತಾ ಬಂದಿದೆ ಆದರೂ ಬಲಗೈ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಬಲಗೈ ಸಮುದಾಯಕ್ಕೆ ಸಮಾಜದ ಪ್ರಬಲ ಹಾಗೂ ಪ್ರತಿಭಾವಂತ ನಾಯಕರಿಗೆ ಯಾವುದೇ ಸ್ಥಾನಮಾನ ಮಾನ ನೀಡದೆ ಕಡೆಗಣಿಸಿರುವುದು ಖಂಡನೀಯವಾಗಿದೆ ಎಂದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಲಗೈ ಸಮುದಾಯದ ಪ್ರಮುಖರಾದ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ.ಅಂಬಾರಾಯ ಅಷ್ಠಗಿ ಯವರು ಜಿಲ್ಲೆಯ ಪ್ರಮುಖ ದಲಿತ ನಾಯಕರಾಗಿದ್ದು, ಇವರು ಕಲಬುರ್ಗಿ ಗ್ರಾಮೀಣ ಮತಕ್ಷೇತ್ರದ ವಿಧಾನ ಸಭೆ ಚುನಾವಣೆ ಟಿಕೆಟ್ ಗಾಗಿ ಪ್ರಬಲ ಹಾಗೂ ಸಮರ್ಥ ಆಕಾಂಕ್ಷಿಯಾಗಿದ್ದು, ಆ ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ. ಈ ಕ್ಷೇತ್ರದಲ್ಲಿ ಬಲಗೈ ಸಮುದಾಯದ ಸುಮಾರು 50 ಸಾವಿರಕ್ಕಿಂತಲೂ ಹೆಚ್ಚಿನ ಮತಗಳಿದ್ದು, ಅವರಿಗೆ ಬಿಜೆಪಿ ಪಕ್ಷವು ಟಿಕೆಟ್ ನೀಡಿದರೆ ಅವರ ಗೆಲುವು ಸುನಿಶ್ಚಿತ; ಅಲ್ಲದೆ ಅವರ ಪ್ರಭಾವದಿಂದ ಸಮುದಾಯದ ಮತಗಳು ಇತರೆ ಕ್ಷೇತ್ರದ ಅಭ್ಯರ್ಥಿಗಳಿಗೂ ಸಹಕಾರಿಯಾಗಿ ಗೆಲುವು ಸಾಧ್ಯವಾಗಲಿದೆ.

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಬಲಗೈ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ಕೊಟ್ಟು ಕಲಬುರಗಿ ಗ್ರಾಮೀಣ ಹಾಗೂ ಚಿತ್ತಾಪುರ ಮತಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಬೇಕು, ಒಂದು ವೇಳೆ ನಮ್ಮ ಆಗ್ರಹವನ್ನು ನಿರ್ಲಕ್ಷ್ಯ ಮಾಡಿದರೆ ಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ಬಿಜೆಪಿ ಪಕ್ಷಕ್ಕೆ ಎಚ್ಚರಿಕೆ ನೀಡಿದರು. ಡಾ.ಗುಂಡಪ್ಪ ಸಿಂಗೆ, ರಾಜಕುಮಾರ್ ಕಗ್ಗನಮಡಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here