ಬಿಸಿ ಬಿಸಿ ಸುದ್ದಿ

ಕಲಬುರಗಿ ಗ್ರಾಮೀಣ, ಚಿತ್ತಾಪುರ ಮತಕ್ಷೇತ್ರ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಿ

ಕಲಬುರಗಿ: 2023 ರ ವಿಧಾನಸಭೆ ಚುನಾವಣೆಯಲ್ಲಿ ಕಲಬುರಗಿ ಗ್ರಾಮೀಣ ಹಾಗೂ ಚಿತ್ತಾಪುರ ಮತಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಪಕ್ಷದವರು ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಚಳವಳಿಯ ರಾಜ್ಯ ಸಂಚಾಲಕ ರವಿ ಮದನಕರ ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಒಟ್ಟು 41 ವಿಧಾನಸಭಾ ಮತಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ 8 (ಮೀಸಲು) ಮತಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಯ ಬಲಗೈ / ಹೊಲೆಯ/ಛಲವಾದಿ ಸಮುದಾಯಕ್ಕೆ ಬಿಜೆಪಿ ಪಕ್ಷವು ಇಲ್ಲಿಯವರೆಗೆ ಯಾವುದೇ ರೀತಿಯ ಅವಕಾಶಗಳನ್ನು ನೀಡಿಲ್ಲ, ಪಕ್ಷದವರು ಬಲಗೈ ಸಮುದಾಯವನ್ನು ಕಡೆಗಣಿಸುತ್ತಿರುವುದನ್ನು ಬಲಗೈ, ಹೊಲೆಯ, ಛಲವಾದಿ ಸಮುದಾಯಕ್ಕೆ ಬಹಳ ಅಸಮಾಧಾನವಿದೆ ಎಂದು ದಲಿತ ಬಲಗೈ ಸಂಘಟನೆಗಳ ಮುಖಂಡರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಧಾನ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕದ 41 ವಿಧಾನಸಭಾ ಮತಕ್ಷೇತ್ರಗಳಲ್ಲಿ ನಮ್ಮ ಸಮಾಜವು ನಿರ್ಣಾಯಕವಾಗಿದೆ.
ಕಳೆದ ಹಲವಾರು ಸಾರ್ವತ್ರಿಕ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಮುದಾಯವು ಬಿಜೆಪಿಗೆ ಬೆಂಬಲಿಸುತ್ತಾ ಬಂದಿದೆ ಆದರೂ ಬಲಗೈ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಬಲಗೈ ಸಮುದಾಯಕ್ಕೆ ಸಮಾಜದ ಪ್ರಬಲ ಹಾಗೂ ಪ್ರತಿಭಾವಂತ ನಾಯಕರಿಗೆ ಯಾವುದೇ ಸ್ಥಾನಮಾನ ಮಾನ ನೀಡದೆ ಕಡೆಗಣಿಸಿರುವುದು ಖಂಡನೀಯವಾಗಿದೆ ಎಂದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಲಗೈ ಸಮುದಾಯದ ಪ್ರಮುಖರಾದ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ.ಅಂಬಾರಾಯ ಅಷ್ಠಗಿ ಯವರು ಜಿಲ್ಲೆಯ ಪ್ರಮುಖ ದಲಿತ ನಾಯಕರಾಗಿದ್ದು, ಇವರು ಕಲಬುರ್ಗಿ ಗ್ರಾಮೀಣ ಮತಕ್ಷೇತ್ರದ ವಿಧಾನ ಸಭೆ ಚುನಾವಣೆ ಟಿಕೆಟ್ ಗಾಗಿ ಪ್ರಬಲ ಹಾಗೂ ಸಮರ್ಥ ಆಕಾಂಕ್ಷಿಯಾಗಿದ್ದು, ಆ ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ. ಈ ಕ್ಷೇತ್ರದಲ್ಲಿ ಬಲಗೈ ಸಮುದಾಯದ ಸುಮಾರು 50 ಸಾವಿರಕ್ಕಿಂತಲೂ ಹೆಚ್ಚಿನ ಮತಗಳಿದ್ದು, ಅವರಿಗೆ ಬಿಜೆಪಿ ಪಕ್ಷವು ಟಿಕೆಟ್ ನೀಡಿದರೆ ಅವರ ಗೆಲುವು ಸುನಿಶ್ಚಿತ; ಅಲ್ಲದೆ ಅವರ ಪ್ರಭಾವದಿಂದ ಸಮುದಾಯದ ಮತಗಳು ಇತರೆ ಕ್ಷೇತ್ರದ ಅಭ್ಯರ್ಥಿಗಳಿಗೂ ಸಹಕಾರಿಯಾಗಿ ಗೆಲುವು ಸಾಧ್ಯವಾಗಲಿದೆ.

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಬಲಗೈ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ಕೊಟ್ಟು ಕಲಬುರಗಿ ಗ್ರಾಮೀಣ ಹಾಗೂ ಚಿತ್ತಾಪುರ ಮತಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್ ನೀಡಬೇಕು, ಒಂದು ವೇಳೆ ನಮ್ಮ ಆಗ್ರಹವನ್ನು ನಿರ್ಲಕ್ಷ್ಯ ಮಾಡಿದರೆ ಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ಬಿಜೆಪಿ ಪಕ್ಷಕ್ಕೆ ಎಚ್ಚರಿಕೆ ನೀಡಿದರು. ಡಾ.ಗುಂಡಪ್ಪ ಸಿಂಗೆ, ರಾಜಕುಮಾರ್ ಕಗ್ಗನಮಡಿ ಇದ್ದರು.

emedialine

Recent Posts

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಂಸದ ರಾಧಾಕೃಷ್ಣ ದೊಡ್ಡಮನಿಗೆ ಸನ್ಮಾನ

ಕಲಬುರಗಿ: ನೂತನ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಯವರನ್ನು ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ…

5 hours ago

ಡಾ. ಮಹೇಶಕುಮಾರ ಗಂವ್ಹಾರಗೆ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪ್ರದಾನ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ…

8 hours ago

ರೆಡ್ಡಿ ಇನ್ಸ್ಟಿಟ್ಯೂಟ್ ಕಿಯೋನಿಕ್ಸ್ ಪ್ರಾö್ಯಂಚೇಸಿಗೆ ಲೋಕಸಭೆ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಭೇಟಿ

ಕಲಬುರಗಿ ಲೋಕಸಭೆಗೆ ಪ್ರಪ್ರಥಮ ಬಾರಿಗೆ ಸ್ಪರ್ಧಿಸಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು (ಶುಕ್ರವಾರ) ನಗರದ ಲಾಲಗೇರಿ ಕ್ರಾಸ್ ಹತ್ತಿರದ…

9 hours ago

ಪತ್ರಕರ್ತ ವೆಂಕಟೇಶ ಮಾನು ಇನ್ನಿಲ್ಲ

ಕಲಬುರಗಿ: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ, ಹಿರಿಯ ಪತ್ರಕರ್ತ ವೆಂಕಟೇಶ ಮಾನು (೫೪) ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…

9 hours ago

ಪತ್ರಕರ್ತ ಮಾನು ನಿಧನಕ್ಕೆ ಪತ್ರಕರ್ತರ ಸಂಘದಿಂದ ನುಡಿ ನಮನ

ಕಲಬುರಗಿ: ನಾಡಿನ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತ ವೆಂಕಟೇಶ ಮಾನು ಅವರ ನಿಧನ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ…

9 hours ago

ಸರ್ಕಾರಿ ಶಾಲಾ-ಕಾಲೇಜು, ಕಚೇರಿಗಳಲ್ಲಿ ಸೊಳ್ಳೆಗಳ ಮೂಲ ತಾಣ ನಾಶಪಡಿಸಲು ಸಿಇಓ ಕರೆ

ಕಲಬುರಗಿ; ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ನಿಟ್ಟಿನಲ್ಲಿ ಜುಲೈ 13 ಶನಿವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ…

10 hours ago