ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಪಕ್ಷದಿಂದ ವಿಶ್ವಕರ್ಮ ಸಮಾಜಕ್ಕೆ ಅನ್ಯಾಯ; ದೇವೇಂದ್ರ ದೇಸಾಯಿ ಕಲ್ಲೂರ

ಕಲಬುರಗಿ: ರಾಜ್ಯದಲ್ಲಿ ಬಹುಸಂಖ್ಯಾತವಾಗಿರುವ ವಿಶ್ವಕರ್ಮ ಸಮಾಜವು ಕಾಯಕ ಪ್ರಿಯ ಸಮಾಜವಾಗಿದೆ. ಸದಾ ಕಾಯಕದಲ್ಲಿರುವ ಸಮಾಜದ ಕೆಲವೇ ಕೆಲವು ವ್ಯಕ್ತಿಗಳು ಇಂದು ರಾಜಕೀಯದಲ್ಲಿದ್ದಾರೆ. ಆದರೆ ವಿಶ್ವಕರ್ಮ ಸಮಾಜದವನ್ನು ಕಾಂಗ್ರೆಸ್ ಪಕ್ಷ ದುಡಿಸಿಕೊಂಡು ಚುನಾವಣೆಯಲ್ಲಿ ತಕ್ಕ ಸ್ಥಾನ ಮಾನ ನೀಡದೆ ಇರುವದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ವಿಶ್ವಕರ್ಮ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಎಚ್ಚರಿಸಿದ್ದಾರೆ.

ಪತ್ರಕೆಗೆ ಹೇಳಿಕೆ ಹೊರಡಿಸಿದ ಅವರು ವಿಶ್ವಕರ್ಮ ಸಮುದಾಯದಲ್ಲಿ ಅನೇಕ ಒಳಪಂಗಡಗಳಿವೆ. ಎಲ್ಲರೂ ಕಾಯಕ ಪ್ರಿಯರು, ರಾಜಕೀಯವಾಗಿ ಆಗಲಿ ಅಥವಾ ಇನ್ನಾವುದೋ ಹೋರಾಟದ ಮುಖಾಂತರವಾಗಿ ಶಾಸನ ಬದ್ಧ ತಮ್ಮ ಅಧಿಕಾರಕ್ಕಾಗಿ ಎಂದು ಮುಂದೆ ಬಂದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ವಿಶ್ವಕರ್ಮ ಸಮುದಾಯಗಳ ಅನೇಕರಿದ್ದಾರೆ. ಅವರಲ್ಲಿ ಕೆಲವೇ ಕೆಲವು ಜನಪ್ರಿಯ ನಾಯಕರಾಗಿದ್ದರು. ಅವರಲ್ಲಿ ಚಿತ್ರದುರ್ಗದ ರಘು ಆಚಾರ್ಯ ಅವರು ಮುಂಚುಣಿನಾಯಕರು.

ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿರುವ ಅವರು ವಿಶ್ವಕರ್ಮ ಸಮುದಾಯಕ್ಕೆ ಸೀಮತವಾಗಿರದೇ ಎಲ್ಲಾ ಸಮುದಾಯಗಳ ಜನಪ್ರಿಯ ನಾಯಕರಾಗಿದ್ದಾರೆ. ಈ ಬಾರಿ ವಿಧಾನ ಸಭೆಗೆ ಸ್ಪರ್ಧೆ ಮಾಡಬೇಕು ಎಂದು ಅವರ ಅಭಿಮಾನಿಗಳು ಪಟ್ಟು ಹಿಡಿದಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕೆಪಿಸಿಸಿಯಲ್ಲಿ ಅರ್ಜಿ ಕೂಡ ಹಾಕಲಾಗಿತ್ತು. ಆದರೆ ಕಾಂಗ್ರೆಸ್ ಪಕ್ಷ ಅವರನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದು ಸಮುದಾಯದ ವಿಶೇಷವಾಗಿ ಅವರ ಅಭಿಮಾನಿಗಳಿಗೆ ನಿರಾಶೆಯಾಗಿದೆ.

ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ವಿಶ್ವಕರ್ಮ ಮುಖಂಡ ಕೆ.ಪಿ. ನಂಜುಂಡಿ ಅವರು ಕೂಡ ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರಳು ದುಡಿದಿದ್ದಾರೆ. ಅವರನ್ನು ಕೂಡ ಕಡೆಗಣಿಸಿದ್ದರಿಂದ ಅವರು ಇಂದು ಬೆರೆ ಪಕ್ಷದಲ್ಲಿ ಗುರುತಿಸಿ ಸೂಕ್ತ ಸ್ಥಾನಮಾನ ನೀಡಲಾಗಿದೆ.

2023 ರಾಜ್ಯ ವಿಧಾ ಸಭೆಯ ಚುನಾವಣೆಯಲ್ಲಿ ಚಿತ್ರದುರ್ಗ ನಗರ ಕ್ಷೇತ್ರದಿಂದ ರಘು ಆಚಾರ್ಯ ಅವರು ಸ್ಪರ್ಧೆ ಖಚಿತ ಎನ್ನುವ ಮಾತುಗಳ ಮತದಾರಲ್ಲಿ ಬಹು ಚರ್ಚಿತ ವಿಷಯವಾಗಿತ್ತು. ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ದವರು ರಘು ಆಚಾರ್ ಅವರನ್ನು ಕೈ ಬಿಟ್ಟಿದ್ದು ಸಮುದಾಯದ ಮತದಾರರಿಗೆ ತೀವ್ರ ನಿರಶಾಶೆಯಾಗಿದೆ. ಮೇ. 13 ರಂದು ನಡೆಯುವ ಮತದಾನಲ್ಲಿ ವಿಶ್ವ ಕರ್ಮ ಸಮುದಾಯಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ದೇವೇಂದ್ರ ದೇಸಾಯಿ ಕಲ್ಲೂರ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

emedialine

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

7 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago