ಸುರಪುರ: ವಿಶ್ವಕರ್ಮ ಸಮಾಜದ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಡಿ ಎಂದು ಯಾದಗಿರಿಯಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಮುಖಂಡರು ಹೇಳಿಕೆ ನೀಡಿರುವುದು ಖಂಡನೀಯವಾಗಿದೆ ಎಂದು ನಗರಸಭೆ ಮಾಜಿ ಸದಸ್ಯ ಹಾಗೂ ವಿಶ್ವಕರ್ಮ ಸಮಾಜದ ಮುಖಂಡ ಮತ್ತು ನ್ಯಾಯವಾಗಿ ಮನೋಹರ ಕುಂಟೋಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ನಗರದಲ್ಲಿ ಹೇಳಿಕೆ ನೀಡಿರುವ ಅವರು,ಕಾಂಗ್ರೆಸ್ ಪಕ್ಷ ಚಿತ್ರದುರ್ಗದಲ್ಲಿ ನಮ್ಮ ಸಮುದಾಯದ ರಘು ಆಚಾರ್ ಅವರಿಗೆ ಟಿಕೆಟ್ ನೀಡದಿರುವುದಕ್ಕೆ ಖಂಡನೆ ವ್ಯಕ್ತಪಡಿಸುತ್ತೇನೆ,ಆದರೆ ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಸಭಾದ ಮುಖಂಡರು ರಾಜ್ಯದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ವಿಶ್ವಕವರ್i ಸಮಾಜ ಮತ ನೀಡಬೇಡಿ ಎನ್ನುವುದು ಸರಿಯಲ್ಲ,ಈ ಹೇಳಿಕೆಗೆ ಕಲ್ಯಾಣ ಕರ್ನಾಟಕ ವಿಶ್ವಕರ್ಮ ಸಮಾಜ ಖಂಡನೆ ವ್ಯಕ್ತಪಡಿಸುತ್ತದೆ.
ಯಾಕೆಂದರೆ ಕಾಂಗ್ರೆಸ್ ಪಕ್ಷ ವಿಶ್ವಕರ್ಮ ಸಮಾಜಕ್ಕೆ ಅನೇಕ ಕೊಡುಗೆ ನೀಡಿದೆ,ವಿಶ್ವಕರ್ಮ ಜಯಂತಿ,ಅಭಿವೃಧ್ಧಿ ನಿಗಮ ಸೇರಿದಂತೆ ಅನೇಕ ಕಡೆಗಳಲ್ಲಿ ಸ್ಥಳಿಯ ಸಂಸ್ಥೆಗಳಲ್ಲಿ ಅವಕಾಶ ನೀಡಿದೆ,ಇದೆಲ್ಲವನ್ನು ಮರೆತು ವಿಶ್ವಕರ್ಮ ಸಮಾಜ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಡಿ ಎನ್ನುವುದು ಸರಿಯಲ್ಲ ಎಂದು ಚಿತ್ರದುರ್ಗದಲ್ಲಿ ರಘು ಆಚಾರ್ ಅವರಿಗೆ ಟಿಕೆಟ್ ಸಿಕ್ಕಿಲ್ಲ ಆದರೆ ಇಲ್ಲಿ ನಮಗೇನು ಕಾಂಗ್ರೆಸ್ ಅನ್ಯಾಯ ಮಾಡಿಲ್ಲ,ಆದ್ದರಿಂದ ನಮ್ಮ ವಿಶ್ವಕರ್ಮ ಸಮಾಜ ಕಾಂಗ್ರೆಸ್ ಬೆಂಬಲಿಸಲಿದೆ ಎಂದು ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…