300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ

0
13

ಕಲಬುರಗಿ: ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಕಾಲಕ್ಕೆ ಒಂದೇ ಜಾಗದಲ್ಲಿ ಕುಳಿತು ಪ್ರಬಂಧ ಬರೆದರು.

ನಗರದ ಕನ್ನಡ ಭವನದ ದರ್ಶನಾಪೂರ ರಂಗಮಂದಿರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತ್ಯುತ್ಸವ ನಿಮಿತ್ತ ಜಿಲ್ಲಾ ಜಯಂತ್ಯುತ್ಸವ ಸಮಿತಿಯಿಂದ ಹಮ್ಮಿಕೊಂಡಿದ್ದ ‘ ಡಾ.ಅಂಬೇಡ್ಕರ್ ಅವರ ರಾಷ್ಟ್ರೀಯ ಕೊಡುಗೆಗಳು, ಪ್ರಜಾಪ್ರಭುತ್ವ ರಕ್ಷಣೆಯಲ್ಲಿ ಯುವಕರ ಪಾತ್ರ ಮತ್ತು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಾಗಿ ಸಂವಿಧಾನಿಕ ಮಾರ್ಗಗಳು ಎಂಬ ವಿಷಯಗಳ 15 ವರ್ಷಗಳಿಗಿಂತ ಕೆಳಗಿನ ಸುಮಾರು 80ಕ್ಕೂ ಹೆಚ್ಚು ಮಕ್ಕಳು ಮತ್ತು 15ರಿಂದ ಮೇಲ್ಪಟ್ಟ ವಿದ್ಯಾರ್ಥಿಗಳು ಪ್ರಬಂಧ ಬರೆದರು.

Contact Your\'s Advertisement; 9902492681

ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಇಒ ವೀರಣ್ಣ ಕೌಲಗಿ ಉದ್ಘಾಟಿಸಿದರು. ಜಿಲ್ಲಾ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ದಿನೇಶ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ಡಾ.ಅರವಿಂದ ಕಟ್ಟಿ, ಸಂದೀಪ ಗುತ್ತೇದಾರ, ಪ್ರಕಾಶ ಮೂಲಭಾರತಿ ಸೇರಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here