ಟಾಂಗಾ ಜಾಥಾಕ್ಕೆ ಚಾಲನೆ: ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಇಂದು ಎಸ್.ವಿ.ಪಿ. ವೃತ್ತದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಟಾಂಗಾ ಜಾಥಾಗೆ ಸ್ವೀಪ್ ಸಮಿತಿಯ ರಾಜ್ಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಡಿ. ಬದೋಲೆ, ಸ್ವೀಪ್ ಸಮಿತಿಯ ಸದಸ್ಯರು ಹಾಗೂ ಇತರರು ಹಾಜರಿದ್ದರು.
ಕಲಬುರಗಿ; ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಮಾಡಿಸುವ ನಿಟ್ಟಿನಲ್ಲಿ ಸ್ವೀಪ್ ಚಟುವಟಿಕೆಗಳನ್ನು ವ್ಯಾಪಕವಾಗಿ ಕೈಗೊಳ್ಳಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಾದ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಮಾತನಾಡುತ್ತಾ, ಕಳೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರಲ್ಲಿ ಅತೀ ಕಡಿಮೆ ಮತದಾನವಾದ 10 ನಗರಗಳ ಪೈಕಿ ಬೆಂಗಳೂರ ನಗರ ಮೊದಲನೇ ಸ್ಥಾನದಲ್ಲಿದರೆ ಕಲಬುರಗಿ ನಗರ ಎರಡನೇ ಸ್ಥಾನದಲ್ಲಿದೆ. ಗುಲಬರ್ಗಾ ಉತ್ತರ, ಗುಲಬರ್ಗಾ ದಕ್ಷಿಣ, ಗುಲಬರ್ಗಾ ಗ್ರಾಮೀಣ ಹಾಗೂ ಚಿತ್ತಾಪುರ ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗಿತ್ತು ಎಂದು ಹೇಳಿದರು.
ನಗರ ಪ್ರದೇಶಗಳಲ್ಲಿ ಹೆಚ್ಚಿನ ಸ್ವೀಪ್ ಚಟುವಟಿಕೆ ಕೈಗೊಂಡು ಈ ಬಾರಿ ಶೇಕಡ 75 ಕ್ಕೂ ಹೆಚ್ಚು ಮತದಾನ ಆಗಲು ಮತದಾರರಲ್ಲಿ ಜಾಗೃತಿ ಮೂಡಿಸಬೇಕೆಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪೂರ ವಿಧಾನಸಭಾ ಕ್ಷೇತ್ರದ ವಾಡಿ ಮತಗಟ್ಟೆ ಸಂಖ್ಯೆ 159 ರಲ್ಲಿ ಶೇ. 22.72 ಹಾಗೂ ಭಂಕೂರ ಮತಗಟ್ಟೆ ಸಂಖ್ಯೆ 49 ರಲ್ಲಿ ಶೇ. 47.19 ರಷ್ಟು ಜಿಲ್ಲೆಯಲ್ಲೇ ಅತಿ ಕಡಿಮೆ ಮತದಾನವಾಗಿತ್ತು. ಈ ಕ್ಷೇತ್ರದಲ್ಲಿ ಈ ಬಾರಿ ಸಂಚರಿಸಿ, ಮತದಾನ ಕಡಿಮೆಯಾಗಿದ್ದಕ್ಕೆ ಕಾರಣಗಳ ತಿಳಿದುಕೊಂಡು ಹೆಚ್ಚಳಕ್ಕೆ ಕ್ರಮಕೈಗೊಳ್ಳಬೇಕು ಎಂದು ಅವರು ಬಿ.ಎಲ್.ಓ. ಗಳಿಗೆ ಸಲಹೆ ನೀಡಿದರು.
ಮತದಾನ ಕುರಿತ ಜಾಗೃತಿ ವಿಡಿಯೋ ಇನ್ನಿತರ ಮೂಲಕ ಹೆಚ್ಚು ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಕರೆ ನೀಡಿದರು. ವೋಟರ್ ಹೆಲ್ಪಲೈನ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡರೆ, ಅದರಲ್ಲಿ ಮತದಾರರ ವಿವರ, ಅಭ್ಯರ್ಥಿಗಳ ವಿವರ ಮುಂತಾದವು ದೊರೆಯಲಿದ್ದು, ಈ ವೋಟರ್ ಹೆಲ್ಪಲೈನ್ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕೆಂದರು.
ಬಿ.ಎಲ್.ಓ.ಗಳು ಜನರ ನೇರ ಸಂಪರ್ಕ ಅಧಿಕಾರಿಗಳಾಗಿರುವುದರಿಂದ ಜನರಿಗೆ ಮತದಾನ ಮಾಡುವಂತೆ ಅರಿವು ಮೂಡಿಸುವ ಜವಾಬ್ದಾರಿ ತಮ್ಮ ಮೇಲೆ ಹೆಚ್ಚಿದೆ ಎಂದರು.
ಜಿಲ್ಲಾ ಪಂಚಾಯತ್ ಸಿ.ಇ.ಓ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಗಿರೀಶ್ ಡಿ. ಬದೋಲೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಶೇ.63 ಮಾತ್ರ ಇದ್ದು,. ಈ ಬಾರಿ ಹೆಚ್ಚಿಸಲು ಸಮಿತಿಯಿಂದ ವಿವಿಧ ಜಾಗೃತಿ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಮೇಣದಬತ್ತಿ ಮೆರವಣಿಗೆ, ಕಲಾವಿದರ ಮೂಲಕ ಚಟುವಟಿಕೆಗಳು, ಸೈಕಲ್ ರ್ಯಾಲಿ, ಬೈಕ್ ರ್ಯಾಲಿ, ರಂಗೋಲಿ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಮುಂತಾದ ಸ್ವೀಪ್ ಚಟುವಟಿಕೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು ಹಾಗೂ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…