ಕಲಬುರಗಿ: ಈಗಾಗಲೇ ರಾಜ್ಯದ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಚುನಾವಣಾ ಆಯೋಗ ಭ್ರಷ್ಟಾಚಾರ ಮುಕ್ತ ಚುನಾವಣೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಪ್ರಾರಂಭವಾಗಿದ್ದು ಚುನಾವಣೆಯಲ್ಲಿ ಗೆಲ್ಲಲು ಅಭ್ಯರ್ಥಿಗಳು ಅಕ್ರಮ ಮಾರ್ಗ ಹಿಡಿಯುತ್ತಾರೆ.ಮತದಾರರಿಗೆ ಹಣ,ಹೆಂಡದ ಆಮೀಷ ತೋರಿಸುತ್ತಾರೆ.
ಚುನಾವಣ ನೀತಿ ಸಂಹಿತೆ ಕಟ್ಟು ನಿಟ್ಟಾಗಿ ಜಾರಿಗೆ ತಂದರೂ ಕಣ್ಣು ತಪ್ಪಿಸಿ ಮತದಾರರಿಗೆ ಹಣ ಹಂಚುವ ಕೆಲಸ ನಡೆಯುತ್ತದೆ.ಕೂಡಲೇ ಬಿಗಿ ಕ್ರಮ ಕೈಗೊಂಡರೆ ಅಕ್ರಮಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ.ಅನೇಕ ಕಡೆ ವಾಹನಗಳನ್ನು ತಪಾಸಣೆ ಮಾಡಲು ಪೊಲೀಸ್ ಇಲಾಖೆ ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ.ದಾಖಲೆ ಇಲ್ಲದ ಕೋಟ್ಯಂತರ ರೂಪಾಯಿಗಳನ್ನು ಜಪ್ತಿ ಮಾಡಿರುವ ಪೊಲೀಸರ ಕಾರ್ಯ ಚರಣೆ ಶ್ಲಾಘನೀಯ ಎಂದಿದ್ದಾರೆ.
ಚುನಾವಣೆ ಮುಗಿಯುವವರೆಗೂ ಚುನಾವಣಾ ಆಯೋಗ ಭ್ರಷ್ಟಾಚಾರದಲ್ಲಿ ತೊಡಗುವ ಅಭ್ಯರ್ಥಿಗಳ ಮೇಲೆ ಹದ್ದಿನ ಕಣ್ಣಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…