ಕಲಬುರಗಿ; ಕಲಬುರಗಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಆರ್.ಕರ್ನೂಲ್ ಇವರ ಆದೇಶದಂತೆ ಜಿಲ್ಲೆಯ ಕೆಳಕಂಡ ದಿನಾಂಕಗಳಂದು ಕಲಬುರಗಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇದೇ ಏಪ್ರಿಲ್ 12 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಿತ್ತಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕಲಬುರಗಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಕರ್ನಾಟಕ ಲೋಕಾಯುಕ್ತ ಡಿ.ಎಸ್.ಪಿ. ಯವರಾದ ಮಂಜುನಾಥ.ಕೆ ಗಂಗಲ್ (ಮೊಬೈಲ್ ಸಂಖ್ಯೆ 9448136853) ಮತ್ತು ಸಿದ್ದಲಿಂಗಪ್ಪಗೌಡ ಪಾಟೀಲ್ (ಮೊಬೈಲ್ ಸಂಖ್ಯೆ 9448629630) ಹಾಗೂ ಕರ್ನಾಟಕ ಲೋಕಾಯುಕ್ತ ಪಿ.ಐ. ಗಳಾದ ಧೃವತಾರಾ.ಸಿ. (ಮೊಬೈಲ್ ಸಂಖ್ಯೆ 8861186582), ಅಕ್ಕಮಹಾದೇವಿ (ಮೊಬೈಲ್ ಸಂಖ್ಯೆ 9886864623) ಹಾಗೂ ನಾನಾಗೌಡ. ಆರ್. ಪಾಟೀಲ್ (ಮೊಬೈಲ್ ಸಂಖ್ಯೆ 9880789100) ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುತ್ತಿದ್ದರೆ ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ ಅಥವಾ ಕಚೇರಿಗೆ ಅಲೆದಾಡಿಸುತ್ತಿದ್ದಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಯಾರಾದರೂ ಲಂಚ ಕೇಳಿದ್ದಲ್ಲಿ ಕಲಬುರಗಿ ಕರ್ನಾಟಕ ಲೋಕಾಯುಕ್ತರ ಗಮನಕ್ಕೆ ತರಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ, ಕಂಪೌಂಡ್, ಕಲಬುರಗಿ-585102 ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-295364ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…