ಹುಣಸಗಿಯ ಎಲ್ಲಾ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಘೋಷಿಸಲು ಮನವಿ

0
16

ಸುರಪುರ: ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಕಳೆದ ಏಪ್ರಿಲ್ 6 ರಂದು ಗಲಾಟೆ ನಡೆದ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನ ಎಲ್ಲಾ ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಮುಖಂಡರು ಕಲಬುರ್ಗಿಯಲ್ಲಿ ಈಶಾನ್ಯ ವಲಯ ಪೊಲೀಸ್ ಮಹಾ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.

ಮತಕ್ಷೇತ್ರದ ಹುಣಸಗಿ ತಾಲೂಕಿನಾದ್ಯಂತ ಹೆಚ್ಚಿನ ಅರೆಸೇನಾ ಪಡೆ ಹಾಗೂ ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಮತ್ತು ಚುನಾವಣೆ ಮುಗಿಯುವವರೆಗೂ ಹುಣಸಗಿ ತಾಲೂಕಿಗೆ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಕ್ರಾಂತಿಕಾರಿ) ಮುಖಂಡರು ಒತ್ತಾಯಿಸಿದ್ದಾರೆ.

Contact Your\'s Advertisement; 9902492681

ಈ ಕುರಿತು ಕಲಬುರಗಿಯ ಈಶಾನ್ಯ ವಲಯ ಪೋಲಿಸ್ ಮಹಾನಿರೀಕ್ಷಕರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿರುವ ಮುಖಂಡರು ಇತ್ತೀಚೆಗೆ ಕೊಡೆಕಲ್ ಮಾರ್ಗವಾಗಿ ಪ್ರಚಾರಕ್ಕಾಗಿ ನಾರಾಯಣಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಹಾಗೂ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಸುರಪುರ ಸಂಸ್ಥಾನದ ಅರಸು ವಂಶಸ್ಥರಾದ ರಾಜಾ ಕೃಷ್ಣಪ್ಪ ನಾಯಕ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಲ್ಲದೆ ಮಾರಕಾಸ್ತ್ರಗಳಿಂದ ಹಲ್ಲೆವೆಸಗಿದ್ದಾರೆ.

ಘಟನೆಯಲ್ಲಿ ಅನೇಕ ಕಾಂಗ್ರೆಸ್ ಮುಖಂಡರು ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅಲ್ಲದೆ ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿಯೇ ಕಲ್ಲು, ಬಡಿಗೆಗಳಿಂದ 15ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಲಾಗಿದೆ,ಹುಣಸಗಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಪ್ರಚಾರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ ಮುಂಬರುವ ದಿನಗಳಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅನಾಹುತಗಳಾಗುವ ಸಂಭವವಿರುತ್ತದೆ.

ಆದ್ದರಿಂದ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡು ಚುನಾವಣೆ ಮುಗಿಯುವವರೆಗೂ ಈ ಭಾಗದಲ್ಲಿ ಐಪಿಎಸ್ ಅಧಿಕಾರಿಗಳನ್ನು ನೇಮಿಸಬೇಕು ಮತ್ತು ಹುಣಸಗಿ ತಾಲೂಕಿನಾದ್ಯಂತ ಹೆಚ್ಚಿನ ಅರೆಸೇನಾ ಪಡೆ ಹಾಗೂ ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಬೇಕು, ಹುಣಸಗಿ ತಾಲೂಕಿನ ಎಲ್ಲಾ ಗ್ರಾಮಗಳ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಕೇಂದ್ರಗಳೆಂದು ಘೋಷಿಸಿ, ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆಯಲು ವ್ಯವಸ್ಥೆ ಕೈಗೊಳ್ಳಬೇಕು ಎಂದು ಈಶಾನ್ಯ ವಲಯ ಪೋಲಿಸ್ ಮಹಾನಿರೀಕ್ಷಕರಿಗೆ ಸಲ್ಲಿಸಿರುವ ಮನವಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರುಗಳಾದ ಮಾನಪ್ಪ ಕಟ್ಟಿಮನಿ, ಮಾನಪ್ಪ ಕರಡಕಲ್, ಮಾನು ಗುರಿಕಾರ, ಮಾನಪ್ಪ ಬಿಜಾಸಪುರ, ವೀರಭದ್ರಪ್ಪ ತಳವಾರಗೇರಿ, ಬಸವರಾಜ ದೊಡ್ಡಮನಿ ಶೆಳ್ಳಗಿ, ಹುಲಗಪ್ಪ ಗ್ಯಾಂಗಿನ್, ಮಲ್ಲಿಕಾರ್ಜುನ ಬಡಿಗೇರ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here