ಬಿಸಿ ಬಿಸಿ ಸುದ್ದಿ

ಮತದಾರರು ತಪ್ಪದೇ ಮತದಾನ ಮಾಡಿ; ಪ್ರಥಮ ಬಾರಿಗೆ ಮತ ಚಲಾಯಿಸುವವರಿಗೆ ಸನ್ಮಾನ

ಶಹಾಬಾದ :ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನ ತುಂಬಾ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವಾಗಿದ್ದು, ಎಲ್ಲಾ ಮತದಾರರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದೇ ಆಸೆ-ಆಕಾಂಕ್ಷೆಗಳಿಗೆ ಒಳಗಾಗದೇ, ಪ್ರಜ್ಞಾಪೂರ್ವಕವಾಗಿ ಮತ್ತು ಸೂಕ್ತ ವ್ಯಕ್ತಿಗೆ ಮತದಾನ ಮಾಡಿ, ಚುನಾಯಿಸಿದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವಿದೆ ಎಂದು ಗುವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ವಾಸುದೇವ ಸೇಡಂ ಹೇಳಿದರು.

ಸಮೀಪದ ನಂದೂರ(ಕೆ) ಗ್ರಾಮದ ಬನ್ನಿ ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಥಮ ಬಾರಿಗೆ ಮತ ಚಲಾಯಿಸುವವರಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಉಪನ್ಯಾಸಕ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ ಮಾತನಾಡಿ, ಜ್ಞಾನಿಯಾಗಿರುವ ಮತ್ತು ಸಮಾಜದ ಬಗ್ಗೆ ನಿಜವಾದ ಕಳಕಳಿಯುಳ್ಳ ವ್ಯಕ್ತಿಯನ್ನು, ಭ್ರಷ್ಟಾಚಾರ ರಹಿತವಾಗಿ, ಹಣ, ಹೆಂಡ ಸ್ವೀಕರಿಸದೇ, ಪ್ರಾಮಾಣಿಕವಾಗಿ ಮತ ಚಲಾಯಿಸಿ, ಅಂತಹ ಜನಪ್ರತಿನಿಧಿಗಳನ್ನು ಚುನಾಯಿಸಿದರೆ, ಪ್ರಜಾಪ್ರಭುತ್ವದ ವ್ಯವಸ್ಥೆ ಬಲಿಷ್ಠವಾಗುವುದರ ಜೊತೆಗೆ, ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯವಿದೆ. ಪ್ರತಿಶತ ಮತದಾನವಾದರೆ ಅತ್ಯಂತ ಪ್ರಭಾವಶಾಲಿ ಜನನಾಯಕರು ದೊರೆಯಲು ಸಾಧ್ಯವಾಗುತ್ತದೆ. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಶಿವಯೋಗಪ್ಪ ಬಿರಾದಾರ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಪ್ರಮುಖರಾದ ಲಕ್ಷ್ಮೀಕಾಂತ ಮಡಿವಾಳ, ಮಲ್ಲಿಕಾರ್ಜುನ ಮಡಿವಾಳ, ನಾಗಣ್ಣ, ಶ್ರೀದೇವಿ, ಜಗದೇವಪ್ಪ, ರೇವಮ್ಮ, ಮಲ್ಲಿಕಾರ್ಜುನ, ಲಕ್ಷ್ಮೀಕಾಂತ ಮಮ್ಮಾಣೆ, ಮಲ್ಲಿಕಾರ್ಜುನ ಹೂಗಾರ, ಅನಿಲಕುಮಾರ ಹೂಗಾರ, ಶಿವಶರಣಪ್ಪ ಮಡಿವಾಳ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

emedialine

Recent Posts

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಂಸದ ರಾಧಾಕೃಷ್ಣ ದೊಡ್ಡಮನಿಗೆ ಸನ್ಮಾನ

ಕಲಬುರಗಿ: ನೂತನ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಯವರನ್ನು ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ…

7 hours ago

ಡಾ. ಮಹೇಶಕುಮಾರ ಗಂವ್ಹಾರಗೆ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪ್ರದಾನ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ…

11 hours ago

ರೆಡ್ಡಿ ಇನ್ಸ್ಟಿಟ್ಯೂಟ್ ಕಿಯೋನಿಕ್ಸ್ ಪ್ರಾö್ಯಂಚೇಸಿಗೆ ಲೋಕಸಭೆ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಭೇಟಿ

ಕಲಬುರಗಿ ಲೋಕಸಭೆಗೆ ಪ್ರಪ್ರಥಮ ಬಾರಿಗೆ ಸ್ಪರ್ಧಿಸಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು (ಶುಕ್ರವಾರ) ನಗರದ ಲಾಲಗೇರಿ ಕ್ರಾಸ್ ಹತ್ತಿರದ…

11 hours ago

ಪತ್ರಕರ್ತ ವೆಂಕಟೇಶ ಮಾನು ಇನ್ನಿಲ್ಲ

ಕಲಬುರಗಿ: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ, ಹಿರಿಯ ಪತ್ರಕರ್ತ ವೆಂಕಟೇಶ ಮಾನು (೫೪) ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ…

11 hours ago

ಪತ್ರಕರ್ತ ಮಾನು ನಿಧನಕ್ಕೆ ಪತ್ರಕರ್ತರ ಸಂಘದಿಂದ ನುಡಿ ನಮನ

ಕಲಬುರಗಿ: ನಾಡಿನ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತ ವೆಂಕಟೇಶ ಮಾನು ಅವರ ನಿಧನ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ…

11 hours ago

ಸರ್ಕಾರಿ ಶಾಲಾ-ಕಾಲೇಜು, ಕಚೇರಿಗಳಲ್ಲಿ ಸೊಳ್ಳೆಗಳ ಮೂಲ ತಾಣ ನಾಶಪಡಿಸಲು ಸಿಇಓ ಕರೆ

ಕಲಬುರಗಿ; ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ನಿಟ್ಟಿನಲ್ಲಿ ಜುಲೈ 13 ಶನಿವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ…

12 hours ago