ಬಿಸಿ ಬಿಸಿ ಸುದ್ದಿ

ಸುರಪುರ:ವಿವಿಧೆಡೆ ಡಾ:ಬಿ.ಆರ್ ಅಂಬೇಡ್ಕರ್ 132ನೇ ಜಯಂತಿ ಆಚರಣೆ

ಸುರಪುರ: ತಾಲೂಕು ಆಡಳಿತ ದಿಂದ ನಗರದ ತಹಸೀಲ್ದಾರ್ ಕಚೇರಿ ಹಾಗೂ ಡಾ:ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಡಾ:ಬಿ.ಆರ್ ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಆಚರಿಸಲಾಗಿದೆ.ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದ್ದಾರೆ.ಅಲ್ಲದೆ ಬಸ್ ನಿಲ್ದಾಣದ ಬಳಿಯಲ್ಲಿನ ಅಂಬೇಡ್ಕರ್ ವೃತ್ತದಲ್ಲಿನ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.

ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ್ ಮಲ್ಲಯ್ಯ ದಂಡು,ಸಮಾಜ ಕಲ್ಯಾಣ ಇಲಾಖೆಯ ಶೃತಿ ಎಸ್,ಎಮ್.ಡಿ ಸಲೀಂ,ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಪಾಟೀಲ್,ಅಕ್ಷರದಾಸೋಹ ಸಹಾಯಕ ನಿರ್ದೇಶಕ ಮೌನೇಶ ಕಂಬಾರ,ಉಪ ಖಜಾನಾಧಿಕಾರಿ ಮೋನಪ್ಪ ಶಿರವಾಳ,ಬಿಇಓ ಮಹೇಶ ಪೂಜಾರಿ,ಶ್ರೀಶೈಲ ಯಂಕಂಚಿ,ಹಣಮಂತ ಪೂಜಾರಿ ಹಾಗೂ ಮುಖಂಡರಾದ ವೆಂಕಟೇಶ ಹೊಸ್ಮನಿ,ಯಲ್ಲಪ್ಪ ಹುಲಕಲ್,ನಾಗಣ್ಣ ಕಲ್ಲದೇವನಹಳ್ಳಿ,ಮಾಳಪ್ಪ ಕಿರದಳ್ಳಿ,ನಿಂಗಣ್ಣ ಗೋನಾಲ,ಧರ್ಮರಾಜ ಬಡಿಗೇರ,ಹಣಮಂತ ಕಟ್ಟಿಮನಿ,ರಾಜು ಕಟ್ಟಿಮನಿ,ಗಿರೀಶ ಶಾಖನವರ್,ವಿಕ್ರಮ ಕರಡಕಲ್ ಸೇರಿದಂತೆ ಅನೇಕರಿದ್ದರು.

ಹಾವಿನಾಳ: ತಾಲೂಕಿನ ಹಾವಿನಾಳ ಗ್ರಾಮದಲ್ಲಿ ನಡೆದ ಡಾ:ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ನರಸಿಂಹ ನಾಯಕ ರಾಜುಗೌಡ ಭಾಗವಹಿಸಿದ್ದರು.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ ತಾತಾ ಸೇರಿದಂತೆ ಗ್ರಾಮದ ಅನೇಕ ಜನ ಮುಖಂಡರು ಭಾಗವಹಿಸಿದ್ದರು.

ಅಂಬೇಡ್ಕರ್ ವೃತ್ತ:ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಡಾ:ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಯಂತಿ ಆಚರಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ವಿಠ್ಠಲ್ ಯಾದವ್,ಮಾನಪ್ಪ ಕರಡಕಲ್,ವೆಂಕಟೇಶ ಹೊಸ್ಮನಿ,ಶಿವಕುಮಾರ ಕಟ್ಟಿಮನಿ,ಮಾಳಪ್ಪ ಕಿರದಳ್ಳಿ,ಮಂಜುನಾಥ ಹೊಸ್ಮನಿ,ರಾಜು ಕಟ್ಟಿಮನಿ ಸೇರಿದಂತೆ ಅನೇಕರಿದ್ದರು.

ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ವಸತಿ ನಿಲಯ: ನಗರದ ಸಮಾಜ ಕಲ್ಯಾಳ ಇಲಾಖೆ ಅಡಿಯಲ್ಲಿ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಡಾ:ಬಿ.ಆರ್ ಅಂಬೇಡ್ಕರ್ ಅವರ 132ನೇ ಜಯಂತಿ ಆಚರಿಸಲಾಗಿದೆ.ವಸತಿ ನಿಲಯದ ಮೇಲ್ವಿಚಾರಕರಾದ ಎನ್.ಎಮ್ ಪೀರಗೋಳ,ಶಿವನಗೌಡ,ಗೋವಿಂದಗೌಡ,ಮಹಾದೇವಪ್ಪ ಬೊಮ್ಮನಹಳ್ಳಿ ಸೇರಿದಂತೆ ಪ್ಯಾರಾ ಮಿಲಿಟರಿ ಪಡೆಯ ಸೈನಿಕರು ಹಾಗೂ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

3 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

15 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

16 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

17 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

17 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

18 hours ago