ಕಲಬುರಗಿ; ಇಂದು ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ | ಒಟ್ಟು 11 ನಾಮಪತ್ರ ಸಲ್ಲಿಕೆ 

0
34

ಕಲಬುರಗಿ; ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಎರಡನೇ ದಿನವಾದ ಶನಿವಾರ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಮೂವರು ಅಭ್ಯರ್ಥಿಗಳಿಂದ ಮೂರು ನಾಮಪತ್ರಗಳು  ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.

ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಪೈಕಿ  ಗುಲಬರ್ಗಾ ಗ್ರಾಮೀಣ ಹಾಗೂ ಗುಲಬರ್ಗಾ ದಕ್ಷಿಣ ಕ್ಷೇತ್ರದಲ್ಲಿ ನಾಮಪತ್ರಗಳು ಸಲ್ಲಿಕೆಯಾಗಿವೆ. ಇನ್ನುಳಿದ ಅಫಜಲಪುರ, ಜೇವರ್ಗಿ, ಚಿತ್ತಾಪುರ, ಸೇಡಂ, ಚಿಂಚೋಳಿ, ಗುಲಬರ್ಗಾ (ಉತ್ತರ) ಹಾಗೂ ಆಳಂದ ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

43-ಗುಲಬರ್ಗಾ ಗ್ರಾಮೀಣ (ಮೀಸಲು) ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಮತ್ತಿಮಡು ಅವರು 1 ನಾಮಪತ್ರ ಸಲ್ಲಿಸಿದ್ದಾರೆ. 44-ಗುಲಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ  ಶಶಿಧರ ಬಸವರಾಜ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸಿದ್ದರಾಮ ಪಾಟೀಲ (ಸಿದ್ದು ಪಾಟೀಲ) ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.

ಇದುವರೆಗೆ ಒಟ್ಟಾರೆ 11 ಅಭ್ಯರ್ಥಿಗಳಿಂದ 11 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20  ಕೊನೆಯ ದಿನವಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here