ಸಿಯುಕೆಯಲ್ಲಿ ಸತ್ಯಾಗ್ರಹ ನಿರತ ವಿದ್ಯಾರ್ಥಿ ಅಸ್ವಸ್ಥ: ರೋಹಿತ್ ವೇಮೂಲ ಘಟನೆ ಮರುಕರಿಳಿಸದಿರಲಿ

0
90

ಕಲಬುರಗಿ: ಇಲ್ಲಿನ ಕೇಂದ್ರೀಯ ವಿಶ್ವ ವಿದ್ಯಾಲಯದ ಸಂಶೋಧನಾ ವಿಭಾಗದ ವಿದ್ಯಾರ್ಥಿ ತನ್ನ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳು ಮತ್ತು ವಿಚಾರಣೆ ಹೆಸರಲ್ಲಿ ನೀಡುತ್ತಿರುವ ಮಾನಸಿಕ ಕಿರುಕುಳ ನಿಲ್ಲಿಸಬೇಕೆಂದು ಆಗ್ರಹಿಸಿ ಕಳೇದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಿರತ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದಾರೆ.

ನಂದಪ್ಪ ಅಸ್ವಸ್ಥಗೊಂಡ ಸಂಶೋಧನಾ ವಿದ್ಯಾರ್ಥಿಯಾಗಿದ್ದು,
ಕಳೇದ ನಾಲ್ಕು ದಿನಗಳಿಂದ ಜಿಲ್ಲೆಯ ಕಡಗಂಚಿ ಕೇಂದ್ರೀಯ ವಿಶ್ವ ವಿದ್ಯಾಲಯದ ಆಡಳಿತ ಸೌಧದಲ್ಲಿ ತನಗಾದ ಅನ್ಯಾಯದ ವಿರುದ್ಧ ಸತ್ಯಾಗ್ರಹ ನಡೆಸಿದ್ದಾರೆ.

Contact Your\'s Advertisement; 9902492681

ಆದರೆ ವಿದ್ಯಾರ್ಥಿಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದೇ ಕುಲಪತಿಗಳು ಮತ್ತು ವಿವಿಯ ಅಧಿಕಾರಿಗಳು ನಿರ್ಲಕ್ಷ್ಯ ತೊರುತ್ತಿದ್ದಾರೆ ಎಂದು ಕೆಪಿಆರ್ಎಸ್ ಜಿಲ್ಲಾ ಮುಖಂಡರಾದ ಮಮಶೇಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಭುದ ಭಾರತ ಸಂಘರ್ಷ ಸಮಿತಿಯ ಅಶ್ವಿನಿ ಮದನರ್ ಅವರು ರೋಹಿತ್ ವೆಮೂಲಾ ಘಟನೆ ಜಿಲ್ಲೆಯಲ್ಲಿ ಸಂಭವಿಸದಂತೆ ವಿವಿಯ ಕುಲಪತಿಗಳು ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ಸದ್ಯ ಅಸ್ತಿಸ್ಥಗೊಂಡ ವಿದ್ಯಾರ್ಥಿಯನ್ನು ನಗರದ ಇಎಸ್ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here