ಆನಂದ ಆರ್. ಪಪ್ಪು ನೇಮಕ

0
12

ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಹಾಗೂ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ರವರ ಶಿಫಾರಸ್ಸಿನ ಮೇರೆಗೆ ಕಲಬುರಗಿ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರನ್ನಾಗಿ ಆನಂದ ಆರ್. ಪಪ್ಪು ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ವೀರನಾಯಕ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಹಗಲಿರುಳು ಶ್ರಮ ವಹಿಸುತ್ತಿರೆಂದು ನಂಬಿ ಕಾಂಗ್ರೆಸ್ ಪಕ್ಷದ ಈ ಮಹತ್ವದ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ. ತಾವು ಈ ಜವಾಬ್ದಾರಿಯನ್ನು ಹೊತ್ತುಕೊಂಡು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರ ಸಹಯೋಗದೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಸಂಘಟನೆಯಲ್ಲಿ ಭಾಗಿಯಾಗಿ ಈ ದಿಸೆಯಲ್ಲಿ ತಾವು ಹೆಚ್ಚಿನ ಯಶಸ್ಸು ಸಾಧಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here