ಸುರಪುರದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ

1
137

ಸುರಪುರ: ನಗರದ ಶ್ರೀಪ್ರಭು ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತದಿಂದ ೭೩ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಬೆಳಿಗ್ಗೆ ಒಂಬತ್ತು ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ ಸುರೇಶ ಅಂಕಲಗಿ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿ,ಈಬಾರಿ ಕರ್ನಾಟಕದಲ್ಲಿ ಅನೇಕ ಕಡೆ ಮಳೆಯಿಂದ ಅಪಾರ ಪ್ರಮಾಣದ ಹಾನಿಯುಂಟಾಗಿದೆ,ಅದರಲ್ಲೂ ನಮ್ಮ ಉತ್ತರ ಕರ್ನಾಟಕ ಭಾಗದಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿರುವ ಕಾರಣ ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

Contact Your\'s Advertisement; 9902492681

ಸ್ವಾತಂತ್ರ್ಯ ದಿನವೆಂದರೆ ಭಾರತೀಯರಿಗೆ ರಾಷ್ಟ್ರೀಯ ಹಬ್ಬವಿದ್ದಂತೆ,ಈಬಾರಿ ಜಮ್ಮು ಕಾಶ್ಮೀರ ಮತ್ತು ಲಡಾಕ್ ಪ್ರದೇಶದಲ್ಲಿದ್ದ ಕಲಂ ೩೭೦ನ್ನು ರದ್ದುಗೊಳಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಮತ್ತು ಗೃಹ ಸಚಿವ ಅಮೀತ್ ಶಾಜಿಯವರು ದೇಶಕ್ಕೆ ಉಡುಗೊರೆ ನೀಡಿದ್ದಾರೆ,ಆದ್ದರಿಂದ ಕೇಂದ್ರದ ಸರಕಾರಕ್ಕೆ ಅಭಿನಂಧಿಸುವುದಾಗಿ ತಿಳಿಸಿದರು. ಅಲ್ಲದೆ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರವಾಗಿ ಕಾಮಗಾರಿ ಆರಂಭಿಸಲಾಗುತ್ತಿದ್ದು, ಶೀಘ್ರದಲ್ಲಿಯೆ ಟೆಂಡರ್ ಕರೆಯಲಾಗುವುದು ಎಂದರು.ತಾಲ್ಲೂಕಿನಲ್ಲಿ ಯಾವುದೆ ಕುಟುಂಬ ಆಶ್ರಯ ಮನೆಗಳಿಲ್ಲದಿದ್ದರೆ ಅಂತವರು ಸರಕಾರದಿಂದ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ.ಮನೆ ಇಲ್ಲದವರು ನಗರಸಭೆಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದರು.ಇನ್ಮೇಲೆ ಯಾವುದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸಬೇಡಿ.ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ತಿಳಿಸಿದರು.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ ಸುರೇಶ ಅಂಕಲಗಿ ಹಾಗು ಪ್ರಾಸ್ತಾವಿಕವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಮರೇಶ ಕುಂಬಾರ ಮಾತನಾಡಿದರು.ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ,ಗೃಹ ರಕ್ಷಕದಳ,ಎನ್.ಸಿ.ಸಿ,ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳಿಂದ ಆಕರ್ಷಕ ಪಥ ಸಂಚಲನೆ ನಡೆಸಿ ಗೌರವ ವಂದನೆ ಸಲ್ಲಿಸಿದರು.ಹತ್ತನೆ ತರಗತಿಯಲ್ಲಿ ಉತ್ತಮ ಅಂಕಗಳಿಸಿದ ಮೊದಲು ಮೂವರು ವಿದ್ಯಾರ್ಥಿಗಳಿಗೆ ಲಾಪ್ ಟಾಪ್ ವಿತರಿಸಲಾಯಿತು.

ಧ್ವಜಾರೋಹಣ ಸಂದರ್ಭದಲ್ಲಿ ಸರಿಯಾಗಿ ಕಟ್ಟದಿರುವ ಕಾರಣದಿಂದ ಬೇಗ ಧ್ವಜಾ ಹರದೆ ಕೆಲ ಸಮಯ ಆತಂಕ ಸೃಷ್ಟಿಸಿದ್ದ ಘಟನೆಯು ಜರುಗಿತು.

ಕಾರ್ಯಕ್ರಮದಲ್ಲಿ ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ,ತಾ.ಪಂ ಇಒ ಜಗದೇವಪ್ಪ,ಡಿವಾಯ್‌ಎಸ್‌ಪಿ ಶಿವನಗೌಡ ಪಾಟೀಲ,ಪಿಐ ಆನಂದರಾವ್,ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ(ತಾತಾ),ಸುರೇಶ ಸಜ್ಜನ,ಜಿ.ಪಂ.ಸದಸ್ಯ ಮರಿಲಿಂಗಪ್ಪ ಕರ್ನಾಳ,ವೇಣು ಮಾಧವ ನಾಯಕ,ಸಿಡಿಪಿಒ ಲಾಲಸಾಬ್,ಬಿಸಿಯೂಟದ ಅಧಿಕಾರಿ ಮೌನೇಶ ಕಂಬಾರ,ಎಪಿಎಂಸಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ,ದುರ್ಗಪ್ಪ ಗೋಗಿಕೇರ,ನರಸಿಂಹಕಾಂತ ಪಂಚಮಗಿರಿ,ಗೃಹ ರಕ್ಷಕದಳದ ಕಮಾಂಡರ್ ಯಲ್ಲಪ್ಪ ಹುಲಕಲ್ ಸೇರಿದಂತೆ ನಗರಸಭೆ ಸದಸ್ಯರು ಮತ್ತು ಎಲ್ಲಾ ಇಲಾಖೆಗಳ ಅನುಷ್ಠಾನಾಧಿಕಾರಿಗಳಿದ್ದರು.ಬಿ.ಆರ್.ಪೊಲೀಸ್ ಪಾಟೀಲ ನಿರೂಪಿಸಿದರು,ರಾಜಶೇಖರ ದೇಸಾಯಿ ಸ್ವಾಗತಿಸಿದರು,ಮೌನೇಶ ಕಂಬಾರ ವಂದಿಸಿದರು.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here