ಹಿಂದುಳಿದ ವರ್ಗದ ಜಿಲ್ಲಾ ಉಪಾಧ್ಯಕ್ಷರಾಗಿ ಮರಲಿಂಗಪ್ಪ ಕಮರಡಗಿ ನೇಮಕ

0
17

ಶಹಾಬಾದ : ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಕಲಬುರಗಿ ಜಿಲ್ಲಾ ಉಪಾಧ್ಯಕ್ಷರಾಗಿ ಮರಲಿಂಗಪ್ಪ ಕಮರಡಗಿ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪ ಮತ್ತು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಮತ್ತು ಕಲಬುರಗಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯ ವಿಜಯಕುಮಾರ ಜಿ.ರಾಮಕೃಷ್ಣ ರವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷರನ್ನಾಗಿ ಮರಲಿಂಗಪ್ಪ ಎನ್. ಕಮರಡಗಿ ಅವರಿಗೆ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಮಲ್ಲಿಕಾರ್ಜುನ ಪೂಜಾರಿ ಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here