ಕಲಬುರಗಿ; ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ 2023ರ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿದೆ. ಈ ಸಂದರ್ಭದಲ್ಲಿ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಮದ್ಯಪಾನ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.
2023ರ ಮೇ 10ರಂದು ನಡೆಯುವ ಮತದಾನದ ಪ್ರಯುಕ್ತ (ಮತದಾನವು ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು) ಅಂದರೆ 2023ರ ಮೇ 8 ರ ಸಂಜೆ 6 ಗಂಟೆಯಿಂದ ಮೇ 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮೇ 13 ರಂದು ನಡೆಯುವ ಮತ ಎಣಿಕೆ ಪ್ರಯುಕ್ತ ಮೇ 13 ರ ಬೆಳಗಿನ 6 ಗಂಟೆಯಿಂದ ಮೇ 14ರ ಬೆಳಗಿನ 6 ಗಂಟೆಯವರೆಗೆ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತಹ ಎಲ್ಲಾ ತರಹದ ಮದ್ಯ ಮಾರಾಟ, ಶೇಖರಣೆ, ಮದ್ಯಪಾನವನ್ನು ನಿಷೇಧಿಸಲಾಗಿದ್ದು, ಇದಲ್ಲದೇ ಬಾರ್ಗಳು, ಕ್ಲಬ್ಗಳು, ಮತ್ತು ಬಾರ್ ರೆಸ್ಟೋರೆಂಟ್ ಹಾಗೂ ಮದ್ಯದ ಡೀಪೋ (ಕೆ.ಎಸ್.ಬಿ.ಸಿ.ಎಲ್.) ಗಳನ್ನು ಮುಚ್ಚುವುದರೊಂದಿಗೆ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ “ಶುಷ್ಕ” (ಆಡಿಥಿ ಆಚಿಥಿs) ದಿನಗಳೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135 (ಸಿ) ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳು ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ-10 (ಬಿ) ರನ್ವಯ ಈ ಆದೇಶ ಹೊರಡಿಸಲಾಗಿದೆ.
ಈ ಆದೇಶದಲ್ಲಿನ ಸೂಚನೆಗಳನ್ನು ಉಲ್ಲಂಘಿಸಿದ್ದಲ್ಲಿ ಅಂಥವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಅಧಿನಿಯಮ 1951ರ ಕಲಂ 135ಸಿ (2) ಮತ್ತು (3) ರನ್ವಯ ಶಿಕ್ಷೆಗೆ ಒಳಪಡಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…