ಕಲಬುರಗಿ: ಹಾಸ್ಟೇಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

0
29

ಕಲಬುರಗಿ: ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟಲ್ ನಲ್ಲಿ ವಿದ್ಯಾರ್ಥಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಸಿದ್ದುಪ್ರಸಾದ್ ಶಹಾಪುರ (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜೇವರ್ಗಿ ತಾಲೂಕಿನ ಬೀರಾಳ ಬಿ ಗ್ರಾಮದ ನಿವಾಸಿ.ಬಿಕಾಂ ಮುಗಿದು ಎರಡು ವರ್ಷ ಆಗಿದೆ.ಹಾಸ್ಟೇಲ್ ನ ಹಳೆಯ ವಿದ್ಯಾರ್ಥಿ ಆಗಿದ್ದ ಎನ್ನಲಾಗಿದೆ.

Contact Your\'s Advertisement; 9902492681

ಆದರೆ ಆರ್ಥಿಕ ಸಮಸ್ಯೆ ಇರುವುದರಿಂದ ಹಾಸ್ಟೇಲ್ ನಲ್ಲಿ ವಾಸವಾಗಿದ್ದ. ಕುಟುಂಬದ ಮೂಲಗಳ ಪ್ರಕಾರ ಸಾಲ ಮಾಡಿಕೊಂಡಿದ್ದ.ಮೂರು ದಿನಗಳ ಹಿಂದೆ ಸುಮಾರು ಮೂರು ಲಕ್ಷ ಸಾಲವನ್ನು ಕುಟುಂಬ ಸದಸ್ಯರು ಕಟ್ಟಿದ್ದರು ಆದರೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲಿಸರು ಬೇಟಿ ಪರಿಶೀಲನೆ ಮಾಡಿದ್ದಾರೆ. ಜೇವರ್ಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here