ಬಿಸಿ ಬಿಸಿ ಸುದ್ದಿ

ಕಲಬುರಗಿ: ಚುನಾವಣಾ ತರಬೇತಿಗೆ ಹಾಜರಾಗಲು ಡಿ.ಸಿ. ಸೂಚನೆ

ಕಲಬುರಗಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 9 ವಿಧಾನಸಭಾ ಕ್ಷೇತ್ರಗಳಲ್ಲಿ ಜರುಗುವ ಮತದಾನ ದಿನದಂದು ಕರ್ತವ್ಯಕ್ಕೆ ನಿಯೋಜಿಸಲಾದ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ ಏಪ್ರಿಲ್‌ 23 ರಂದು ಬೆಳಿಗ್ಗೆ 10 ಗಂಟೆಗೆ ಅಯಾ ವಿಧಾನಸಭಾವಾರು ವಿವಿಧ ಸ್ಥಳದಲ್ಲಿ ಚುನಾವಣಾ ಕಾರ್ಯದ ತರಬೇತಿ ಆಯೋಜಿಸಿದ್ದು, ನಿಗದಿತ ಸಮಯಕ್ಕೆ ತಪ್ಪದೆ ಹಾಜರಾಗಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ‌ ವಿ. ಗುರುಕರ್ ಸೂಚಿಸಿದ್ದಾರೆ.

ಯಾವುದೇ ಕಾರಣ ನೀಡಿ ತರಬೇತಿಗೆ ಗೈರಾದಲ್ಲಿ ಅಂತಹ ನೌಕರರ ಮೇಲೆ ಮುಲಾಜಿಲ್ಲದೆ ಪ್ರಜಾ ಪ್ರತಿನಿಧಿ ಕಾಯ್ದೆ-1951 ರನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭಾವಾರು ತರಬೇತಿ ಸ್ಥಳ ವಿವರ ಹೀಗಿದೆ: 34-ಅಫಜಲಪುರ-ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಲ್ಲೂರ್ ರಸ್ತೆ ಅಫಜಲಪೂರ. 35-ಜೇವರ್ಗಿ-ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಿ.ಬಿ.ರಸ್ತೆ ಜೇವರ್ಗಿ. 40-ಚಿತ್ತಾಪುರ-

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಹಾಬಾದ ರಸ್ತೆ ಚಿತ್ತಾಪುರ. 41-ಸೇಡಂ-ನೃಪತುಂಗಾ ಕಲಾ ಮತ್ತು ವಾಣಿಜ್ಯ ಕಾಲೇಜು, ಉಡಗಿ ರಸ್ತೆ‌ ಸೇಡಂ.

42-ಚಿಂಚೋಳಿ-ಶ್ರೀಮತಿ ಸಿ.ಬಿ.ಪಾಟೀಲ ಪದವಿ ಕಾಲೇಜು‌ ಚಂದಾಪುರ. 43-ಗುಲಬರ್ಗಾ (ಗ್ರಾಮೀಣ)-ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಕಲಬುರಗಿ. 44-ಗುಲಬರ್ಗಾ (ದಕ್ಷಿಣ)-ಎನ್.ವಿ.ಕನ್ಯಾ ಪ್ರೌಢ ಶಾಲೆ-ಎನ್.ವಿ. ಬಾಯ್ಸ್ ಸ್ಕೂಲ್-ಎನ್.ವಿ.ಪದವಿ ಕಾಲೇಜು ಎಸ್.ಬಿ.ಟೆಂಪಲ್, ಕಲಬುರಗಿ. 45-ಗುಲಬರ್ಗಾ (ಉತ್ತರ)-ಅಪ್ಪಾ ಕಿಡ್ಸ್ ವರ್ಲ್ಡ್ ಶಾಲೆ ಮತ್ತು ದೊಡ್ಡಪ್ಪ ಅಪ್ಪಾ‌ ಬ್ಲಾಕ್ ಶರಣ ನಗರ‌ ಕಲಬುರಗಿ ಹಾಗೂ 46-ಆಳಂದ-ಸರ್ಕಾರಿ ಪದವಿ ಪೂರ್ವ ಕಾಲೇಜು (ಬಾಲಕರ) ಆಳಂದ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago