ಶಹಾಬಾದ: ನಗರದ ಜೇವರ್ಗಿ ರಸ್ತೆಯಲ್ಲಿರುವ ಈದ್ಗಾದಲ್ಲಿ ಶನಿವಾರ ಮುಸ್ಲಿಂ ಸಮುದಾಯದ ಬಾಂಧವರು ಶ್ರದ್ಧಾಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು.
ಬೆಳಿಗ್ಗೆಯಿಂದಲೇ ನಗರದ ವಿವಿಧ ವಾರ್ಡಗಳ ಮುಸ್ಲಿಂ ಬಾಂಧವರು ಹಾಗೂ ಮಕ್ಕಳು ತಂಡೋಪತಂಡವಾಗಿ ಈದ್ಗಾ ಮೈದಾನಕ್ಕೆ ಬಂದು ಅಪಾರ ಸಂಖ್ಯೆಯಲ್ಲಿ ನೆರೆದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮಗುರುಗಳು ಕುರಾನ್ ಪಠಿಸಿದರು. ಒಂದು ತಿಂಗಳ ಕಾಲ ಉಪವಾಸ ಆಚರಿಸಿದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ವ್ರತವನ್ನು ಅಂತ್ಯಗೊಳಿಸಿದರು. ಸಾವಿರಾರು ಜನರು ಪ್ರಾರ್ಥನೆ ನೇರವೇರಿಸಿದ ನಂತರ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು.ಅಲ್ಲದೇ ತಮ್ಮ ಬಂಧು ಮಿತ್ರರಿಗೆ ಮನೆಗೆ ಕರೆದು ವಿಶೇಷ ಭೋಜನ ಸೇವಿಸಿದರು.
ಇದೇ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೇವುನಾಯಕ ಬೆಳಮಗಿ ಈದ್ಗಾಕ್ಕೆ ಬೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು.ಅಲ್ಲದೇ ಹಬ್ಬವನ್ನು ಸಾಮರಸ್ಯದಿಂದ ಎಲ್ಲಾ ಸಮುದಾಯದವರು ಕೂಡಿಕೊಂಡು ಆಚರಿಸುವಂತಾಗಬೇಕು. ರಂಜಾನ್ ಹಬ್ಬ ಎಲ್ಲರ ಬಾಳಲಿ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಡಾ.ರಶೀದ್ ಮರ್ಚಂಟ, ಪೀರಪಾಶಾ, ಕಿರಣ ಚವ್ಹಾಣ,ಫಜಲ್ ಪಟೇಲ್, ಸುಲೇಮಾನ ಕೋಲಾರಕರ್, ಡಾ.ಅಹ್ಮದ್ ಪಟೇಲ್, ಹಾಷಮ್ ಖಾನ, ರಾಜಮಹ್ಮದ್ ರಾಜಾ, ಮತೀನ್ ಸೇಠ,ಅಬ್ದುಲ ಗನಿ ಸಾಬೇರ್,ಅಪ್ಸರ್ ಸೇಠ,ಅಮ್ಜದ್, ಮತೀನ್ ಬಾದಲ್ ಸೇರಿದಂತೆ ಸಾವಿರಾರು ಜನರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…