ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಜ್ಯ ಅಧ್ಯಕ್ಷರನ್ನಾಗಿ ಯುವ ಮುಖಂಡ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ಅವರನ್ನು ನೇಮಕಗೊಳಿಸಲಾಗಿದೆ.ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರದೀಪ ಕಂಕಣವಾಡಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದು,ತಮ್ಮ ಸಮಾಜಪರವಾದ ಉತ್ಸಾಹವನ್ನು ಮನಗಂಡು ರಾಜ್ಯ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದ್ದು ರಾಜ್ಯಾದ್ಯಂತ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ನೂತನ ರಾಜ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನರೆಡ್ಡಿ ನೇಮಕಗೊಂಡ ಹಿನ್ನೆಲೆಯಲ್ಲಿ ಪೇಠ ಅಮ್ಮಾಪುರ ಗ್ರಾಮದಲ್ಲಿ ಅನೇಕರು ಸನ್ಮಾನಿಸಿ ಗೌರವಿಸುವ ಮೂಲಕ ಶುಭ ಕೋರಿದರು.