ಬಿಸಿ ಬಿಸಿ ಸುದ್ದಿ

ಅಧಿಕಾರಕ್ಕಾಗಿ ರಾಜಕೀಯ ಪಕ್ಷಗಳಿಂದಲೆ ಮೌಲ್ಯಗಳಿಗೆ ತಿಲಾಂಜಲಿ

ಕಲಬುರಗಿ: ಪ್ರಸ್ತುತ ನಮ್ಮ ದೇಶದ ಪ್ರಜಾಪ್ರಭುತ್ವ  ವ್ಯವಸ್ಥೆಯಲ್ಲಿ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ತಮ್ಮ ತಮ್ಮ ಪಕ್ಷಗಳ ತತ್ವ ಸಿದ್ಧಾಂತಗಳಿಗೆ ಮತ್ತು ಮೌಲ್ಯಗಳಿಗೆ ತಿಲಾಂಜಲಿ ಕೊಟ್ಟು ಮಾರಿಕೊಳ್ಳುತ್ತಿರುವದು ಮತದಾರರಿಗೆ ಮತ್ತು ದೇಶಕ್ಕೆ ಮಾಡುತ್ತಿರು ಮಹಾ ದ್ರೋಹ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ತಿಳಿಸಿದ್ದಾರೆ.

ದೀರ್ಘಕಾಲದಿಂದ ಒಂದು ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ದರಾಗಿ ಮತದಾರರಿಗೆ ಮೌಲ್ಯಗಳ ಮಂತ್ರ ಬೋಧಿಸಿ ಅಧಿಕಾರದ ಸ್ಥಾನಮಾನಗಳು ಗಿಟ್ಟಿಸಿಕೊಂಡು ಅನುಭವಿಸಿ ನಂತರ ಅಧಿಕಾರ ಸಿಗುವುದಿಲ್ಲ ಎಂಬ ಕಾರಣಕ್ಕೆ ಸ್ವಾರ್ಥಿರಾಜಕಾರಿಣಿಗಳು ರಾತ್ರೋರಾತ್ರಿ ತಮಗೆ ಬೆಳೆಸಿದ ಪಕ್ಷಕ್ಕೆ ಮತ್ತು ಮತ ನೀಡಿದ ಮತದಾರರಿಗೆ ದ್ರೋಹ ಎಸಗುತ್ತಿದ್ದಾರೆ.

ಇಂಥಹ ಸ್ವಾರ್ಥ ರಾಜಕಾರಣಿಗಳಿಗೆ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ರಾಜ ಮರ್ಯಾದೆ ನೀಡುವ ಮೂಲಕ ತಮ್ಮ ಪಕ್ಷದ ನಿಷ್ಠಾವಂತ  ಕಾರ್ಯಕರ್ತರನ್ನು ಕಡೆಗಣಿಸಿ ಅವಕಾಶವಾದಿ ಸ್ವಾರ್ಥ ರಾಜಕಾರಣಿಗಳಿಗೆ ಮಣೆ ಹಾಕಿ ತಮ್ಮ ಪಕ್ಷಗಳಲ್ಲಿ ಸೇರಿಸಿಕೊಳ್ಳುತ್ತಿರುವದು ಕೇವಲ ಅಧಿಕಾರಕ್ಕಾಗಿ ಎಂಬುವುದು ಮತದಾರ ಸರಿಯಾಗಿ ಅರ್ಥಮಾಡಿಕೊಳ್ಳುತ್ತಿದ್ದಾನೆ.ಅಧಿಕಾರಕ್ಕಾಗಿ ಢೊಂಗಿ ಸೇಕ್ಯೋಲರಿಸಂ, ಢೋಂಗಿ ರಾಷ್ಟ್ರೀಯತೆ, ಢೋಂಗಿ ಹಿಂದುತ್ವ ಪ್ರದರ್ಶನ ಮಾಡುವ ರಾಜಕಾರಣಿಗಳು  ವ್ಯಯಕ್ತಿಕ ಹಿತಾಸಕ್ತಿಗಾಗಿ ತಮ್ಮ ಅಸ್ತಿತ್ವವ ಕಾಪಾಡಿಕೊಳ್ಳಲು ಪ್ರಜಾಪ್ರಭುತ್ವದ ವ್ಯವಸ್ಥೆಯ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.

ಇಂಥಹ ಸ್ವಾರ್ಥ ರಾಜಕಾರಣಿಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಿದೆ.ಭವಿಷ್ಯದಲ್ಲಿಎಲ್ಲಾ ರಾಜಕೀಯ ಪಕ್ಷಗಳು ಇಂಥಹ ಕೆಟ್ಟ ಸಂಪ್ರದಾಯ ವ್ಯವಸ್ಥೆ ತಡೆಗಟ್ಟಲು  ಆರು ತಿಂಗಳ ಪೂರ್ವದಲ್ಲಿಯೇ  ತಮ್ಮ ಪಕ್ಷಗಳ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಪ್ರಕಟಿಸಬೇಕು.ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲಪಡಿಸಲು ಇಂಥಹ ವಾಮ ಮಾರ್ಗ ವ್ಯವಸ್ಥೆಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಚುನಾವಣಾ ವ್ಯವಸ್ಥೆಯಲ್ಲಿ ಅಮೋಘವಾದ ಬದಲಾವಣೆಗಳು ಮಾಡುವುದು ಅತಿ ಅವಶ್ಯವಾಗಿದೆ.ಪ್ರಸ್ತುತ ಚುನಾವಣೆ ವ್ಯವಸ್ಥೆ ಕೇವಲ ಶ್ರೀಮಂತರಿಗೆ ಮಾತ್ರ ಸೀಮಿತವಾಗಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಚುನಾವಣೆಯಲ್ಲಿ ಭಾಗವಹಿಸುವದು ಗಗನ ಕುಸುಮವಾಗಿದೆ.

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ ಆಶಯಕ್ಕೆ  ಇದು ವಿರುದ್ಧವಾಗಿದೆ.ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸದ್ದಿದ್ದರೆ ಭವಿಷ್ಯದಲ್ಲಿ ರಾಜಕೀಯ ಪಕ್ಷಗಳು ವ್ಯಾಪಾರಿ ಮನೋಭಾವದ ಕಂಪನಿಗಳಾಗುತ್ತವೆ.ಚುನಾವಣಾ ಆಯೋಗ ಪ್ರಸ್ತುತ ವಾಸ್ತವಿಕ ವಾತಾವರಣವನ್ನು ಗಮನಿಸಿ ಕಠಿಣ ಕ್ರಮಗಳು ಕೈಗೊಳ್ಳುವುದು ತುರ್ತು ಅವಶ್ಯವಾಗಿದೆ.ಸಮಿತಿ ಚುನಾವಣಾ ವ್ಯವಸ್ಥೆಗಳಲ್ಲಿ ಬದಲಾವಣೆ ತರಲು ರಾಷ್ಟ್ರಪತಿಗಳಿಗೆ ಮತ್ತು ಚುನಾವಣಾ ಆಯೋಗಕ್ಕೆ ದೂರ ನೀಡುವುದಲ್ಲದೆ, ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago