ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ವೀರಶೈವ ಲಿಂಗಾಯತರನ್ನು ಕಡೆಗಣಿಸಿದೆ: ಭಗವಂತ ಖೂಬಾ

ಕಲಬುರಗಿ: ಡಿಕೆ ಶಿವುಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಹಗುರವಾಗಿ ಟೀಕಿಸಿರುವುದ ಖಂಡನೀಯ. 2018ರಲ್ಲಿ ವೀರಶೈವ ಲಿಂಗಾಯತರನ್ನು ಒಡೆಯುವ ಕೆಲಸ ಕಾಂಗ್ರೆಸ್ ಮಾಡಿತ್ತು. ಅದಕ್ಕೆ ಉತ್ತರ ಸಮಾಜದವರು ನೀಡಿದರು. ಇದೀಗ ಮತ್ತೆ ಅದನ್ನೇ ಮುಂದುವರಿಸಿರುವ ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಮತ್ತೆ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅಭಿಪ್ರಾಯಪಟ್ಟರು.

ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಿದಡಕಿ ಮೌತ್ ಜಬ್ ಆತಿಹೈತೋ ಓ ಶಹೇರ್ ಕಿ ಔರ್ ಜಾತಾ ಹೈ ಎಂಬ ಗಾದೆ ಮಾತು ಕಾಂಗ್ರೆಸ್ ಪಕ್ಷಕ್ಕೆ ಅನವೈಸಲಿದೆ. ವೀರಶೈವ ಲಿಂಗಾಯತರ ಬಗ್ಗೆ ಟೀಕಿಸಿ ವಿನಾಶದ ಕಡೆಗೆ ಹೊರಟಿದೆ ಎಂದು ಗುಡುಗಿದರು.

ಬಿಜೆಪಿ ಟಿಕಿಟ್ ವಂಚಿತ ವೀರಶೈವ ನಾಯಕರನ್ನು ಕಾಂಗ್ರೆಸ್ ಸೇಳೆದು ಅವರಿಗೆ ಮೂಲೆ ಗುಂಪು ಮಾಡಲು ಹೋರಟಿದೆ. ಜಗದೀಶ್ ಶೇಟ್ಟರ್ ಅವರ ಸೋಲು ಕಟ್ಟಿಟ ಬುತ್ತಿ. ಅವರಿಗೆ ಬಿಜೆಪಿಯ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನಿಸಿತ್ತು. ಆದರೇ ಅವರು ಸ್ವಾರ್ಥ ರಾಜಕಾರಣಕ್ಕಾಗಿ ಪಕ್ಷ ಬಿಟ್ಟಿದ್ದಾರೆ.

ವೀರಶೈವ ಲಿಂಗಾಯತರಿಗೆ 70 ಟಿಕೆಟ್ ನೀಡಬೇಕೆಂಬ ಕಾಂಗ್ರೆಸ್ ನಾಯಕರ ಬೀಡಿಕೆ ಕಡೆಗಣಿಸಿ 40 ಟಿಕೆಟ್ ಮಾತ್ರ ನೀಡಿದೆ. ಸ್ಟಾರ ಪ್ರಚಾರಕ ಪಟ್ಟಿಯಿಂದಲೂ ಹಿರಿಯ ವೀರಶೈವ ಲಿಂಗಾಯತನ್ನು ಹೊರಗಿಟ್ಟಿ ಸಮಾಜವನ್ನು ಕಡೆಗಣಿಸುವ ಕೆಲಸ ಕಾಂಗ್ರೆಸ್ ಮಾಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಬಂದರೇ ಮಿಸಲಾತಿ ಮತ್ತು ಒಳಮಿಸಲಾತಿ ರದ್ದು ಪಡೆಸುವ ಚಿಂತನೆ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿ ತೊರಿಸಲಿ ಎಂದು ಸವಾಲು ಏಸೇದರು. ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಅರ್ಕಾವತಿ ಸೇರಿದಂತೆ ಹಲವು ಹಗರಣ ನಡೆಸಿ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಎಸಿಬಿ ಸಂಸ್ಥೆ ತಂದು ಅಧಿಕಾರಗಳ ಆತ್ಮಹತ್ಯೆಗೆ ಕಾರಣವಾಗಿದೆ. ನಮ್ಮ ಸರಕಾರ ತಪ್ಪು ಮಾಡಿದವರಿಗೆ ಶಿಕ್ಷಿಸುವ ಕೆಲಸ ಮಾಡಿದೆ.

ಕಾಂಗ್ರೆಸ್ ಅಧಿಕಾರದಲ್ಲಿರುವ ಬೇರೆ ರಾಜ್ಯಗಳಲ್ಲಿ ತನ್ನ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಜನರಿಗೆ ಮೋಸ ಮಾಡಿದೆ.ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚಿ ಸುಳ್ಳು ಪ್ರಚಾರ ನಡೆಸುತ್ತಿರುವ ಬಗ್ಗೆ ಜನರಿಗೆ ಗೊತ್ತಾಗಿದೆ ಅದಿಕೆ ಗ್ಯಾರಂಟಿ ಕಾರ್ಡ್ ಕಸದ ಬುಟ್ಟಿಗೆ ಹಾಕುತ್ತಿದ್ದಾರೆ. ಟಬಲ್ ಇಂಜೀನ್ ಸರಕಾರ ರಾಜ್ಯವನ್ನು ಪ್ರಗತಿಕಡೆಗೆ ಮಾಡಿದೆ. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಅಭಿವೃದ್ಧಿಗೆ ಬ್ರೆಕ್ ಬಿಳಲಿದೆ ಎಂದು ದುರಿದ್ದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ, ಬಿಜೆಪಿ ಮಾಧ್ಯಮ ರಾಜ್ಯ ಸಮಿತಿ ಸದಸ್ಯ ವೆಂಕಟ್ ಪ್ರಸಾದ್ ಮಾಲಪಟಿ, ಕಲಬುರಗಿ ಗ್ರಾಮಂತರ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ಸಂತೋಷ್ ಹಾದಿಮನಿ, ಬಾಬುರಾವ್ ಹಾಗರಗುಂಡಗಿ, ನಾಗರಾಜ್ ಮಾಹಾಗಾಂವಕರ ಸೇರಿದಂತೆ ಹಲವರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago