ಬಿಸಿ ಬಿಸಿ ಸುದ್ದಿ

ಬಸವ ಜಯಂತಿ ಉತ್ಸವ ನಿಮಿತ್ತ ರಕ್ತದಾನ ಶಿಬಿರ

ವಿಭೂತಿ ಕೊಡುವ ಕೈಗಳು ದಾರ ಕೊಡುತ್ತಿವೆ. ರುದ್ರಾಕ್ಷಿ ಕೊಡುವ ಕೈಗಳು ತಾಯಿತ ಕೊಡುತ್ತಿವೆ. ಲಿಂಗ ಕೊಡುವ ಕೈಗಳು ನಿಂಬೆಹಣ್ಣು ಕೊಡುತ್ತಿರುವುದು ಸುರ್ದೈವದ ಸಂಗತಿ. – ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಕಲಬುರಗಿ.

ಕಲಬುರಗಿ: ಬಸವಣ್ಣನವರ ವಾರಸುದಾರರು ಎಂದು ಕರೆಯಿಸಿಕೊಳ್ಳುವ ಲಿಂಗಾಯತರಷ್ಟು ನಿರಭಿಮಾನಿಗಳು ಯಾರೂ ಇಲ್ಲ ಎಂದು ಶ್ರೀಶೈಲಂ ಸಾರಂಗ ಮಠ ಹಾಗೂ ಸುಲಫಲ ಮಠದ ಜಗದ್ಗುರು ಸಾರಂಗಧರ ಸ್ವಾಮೀಜಿ ನುಡಿದರು.

ಬಸವ ಜಯಂತಿ ಉತ್ಸವ ಸಮಿತಿ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಬಸವೇಶ್ವರ ವೃತ್ತದಲ್ಲಿ ಭಾನುವಾರ ಜರುಗಿದ ಬಸವ ಜಯಂತ್ಯುತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಅಸಮಾನತೆ, ಭ್ರμÁ್ಟಚಾರ ತುಂಬಿ ತುಳುಕಾಡುತ್ತಿರುವ ಇಂದಿನ ಸಮಾಜಕ್ಕೂ ಬಸವತತ್ವ ಅಗತ್ಯವಿದೆ ಎಂದು ಅವರು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಶರಣ ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ, ಇವನಾರವ ಎಂದು ದೂರಿಕರಿಸದೆ ಇವ ನಮ್ಮವ ಎಂದು ಅಪ್ಪಿಕೊಳ್ಳುವ ಧರ್ಮ ಬಸವ ಧರ್ಮವಾಗಿದ್ದು, ಬಸವಾದಿ ಶರಣರ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವಚನ ಸಾಹಿತ್ಯ ಪ್ರಚಾರ, ಪ್ರಸಾರವಾಗದಂತೆ ಷಢ್ಯಂತ್ರ ಹೂಡಿದ್ದ ಪಟ್ಟಭದ್ರಶಕ್ತಿಗಳು ಲಿಂಗಾಯತರನ್ನು ಮತ ಬ್ಯಾಂಕ್ ಆಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಕುಮಾರ ಮೋದಿ , ಸಮಿತಿ ಗೌರವಾಧ್ಯಕ್ಷ ಕಲ್ಯಾಣಪ್ಪ ಪಾಟೀಲ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ ಸೇರಿದಂತೆ ಅನೇಕರು ವೇದಿಕೆಯಲ್ಲಿ ಇದ್ದರು. ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ವೀರಣ್ಣ ಹೊನ್ನಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಡಾ. ಶ್ರೀಶೈಲ ಘೂಳಿ,ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ, ಮಲ್ಲಿಕಾರ್ಜುನ ಪಾಟೀಲ ಕಾಳಗಿ, ಶರಣು ಭೂಸನೂರ,
ಶರಣಗೌಡ ಪಾಳಾ. ವೀರಣ್ಣ ಗೋಳೆದ, ಡಾ.ನಾಗವೇಣಿ ಪಾಟೀಲ ರೇವೂರ ಇದ್ದರು.

ಬಸವ ಜಯಂತಿ ಅಂಗವಾಗಿ 165 ಜನ ರಕ್ತದಾನ ಮಾಡಿದರು. ನಂತರ ನಗರದ ನಗರೇಶ್ವರ ಶಾಲೆಯಿಂದ ಬಸವೇಶ್ವರ ವೃತ್ತದವರೆಗೆ ಬಸವಣ್ಞನವರ ಭಾವ ಚಿತ್ರದ ಭವ್ಯ ಮೆರವಣಿಗೆ ನಡೆಯಿತು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

10 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

21 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

21 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

23 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

23 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

23 hours ago