ರಂಗಂಪೇಟೆ: ಬಸವೇಶ್ವರ ಪುತ್ಥಳಿ ಪ್ರತಿಷ್ಠಾಪನೆ

0
24

ಸುರಪುರ: ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯಲ್ಲಿನ ಮುಖ್ಯ ಹೆದ್ದಾರಿಯಲ್ಲಿ 16 ಅಡಿ ಎತ್ತರದ ಅಶ್ವಾರೂಢ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಸಲಾಯಿತು.

ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೊದಲಿಗೆ ಪುತ್ಥಳಿಗೆ ಪೂಜೆಯನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ನಗರದ ಕಬಾಡಗೇರದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದ ಪ್ರಭುಲಿಂಗ ಮಹಾಸ್ವಾಮೀಜಿ,ಶಹಾಪುರ ಚರಬಸವೇಶ್ವರ ಮಠದ ಬಸವಯ್ಯ ಶರಣರು,ದೇವಾಪುರ ಜಡಿಶಾಂತಲಿಂಗೇಶ್ವರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,ನಗನೂರಿನ ದಾಸೋಹ ಮಠದ ಶರಣಪ್ಪ ಶರಣರು, ಲಕ್ಷ್ಮೀಪುರ ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ,ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯ ಸ್ವಾಮೀಜಿ,ಕೆಂಭಾವಿ ಗುರುಕಾಂತೇಶ್ವರ ಮಠದ ಚನ್ನಬಸವ ಶಿವಾಚಾರ್ಯ ಸ್ವಾಮೀಜಿ,ಗುಳಬಾಳದ ಮರಿಹುಚ್ಚೇಶ್ವರ ಸ್ವಾಮೀಜಿ,ಕೊಡೇಕಲ್ ದುರದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿ,ಗುರುಮಠಕಲ್ ಖಾಸಾ ಮಠದ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮೀಜಿ, ನಾಗನಟಗಿಯ ಸಿದ್ದರಾಮೇಶ್ವರ ಸ್ವಾಮೀಜಿ,ಮುದನೂರಿನ ಕಂಠಿಮದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ,ಶಹಾಪುರ ಫಕಿರೇಶ್ವರ ಮಠದ ಗುರುಪಾದ ಮಹಾಸ್ವಾಮೀಜಿ,ಮಾಗಣಗೇರಿಯ ಬ್ರಹನ್ಮಠದ ಡಾ:ವಿಶ್ವರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಸಾನಿಧ್ಯವಹಿಸಿದ್ದರು.

Contact Your\'s Advertisement; 9902492681

ಶಾಸಕರಾದ ನರಸಿಂಹ ನಾಯಕ ರಾಜುಗೌಡ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಬಸವೇಶ್ವರರ ಪುತ್ಥಳಿಗೆ ನಮಿಸಿದರು,ಡಿ.ಎಸ್. ಮ್ಯಾಕ್ಸ್ ನಿರ್ದೇಶಕ ಎಸ್.ಪಿ ದಯಾನಂದ್,ರಾಜಾ ಹನುಮಪ್ಪ ನಾಯಕ ತಾತಾ, ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಭಾಗವಹಿಸಿದ್ದರು.ತಾಲೂಕು ವೀರಶೈವ ಲಿಂಗಾಯತ ಸಮಿತಿಯ ಅಧ್ಯಕ್ಷ ಡಾ:ಸುರೇಶ ಸಜ್ಜನ್,ಹಿರಿಯ ಮುಖಂಡರಾದ ಬಸವಲಿಂಗಪ್ಪ ಪಾಟೀಲ್,ಬಸವರಾಜಪ್ಪ ನಿಷ್ಠಿ ದೇಶಮುಖ,ಬಸವರಾಜ ಜಮದ್ರಖಾನಿ,ಮನೋಹರ ಜಾಲಹಳ್ಳಿ,ಬಸ್ಸಣ್ಣ ಬೂದುರ,ಸಂಗಣ್ಣ ಎಕ್ಕೆಳ್ಳಿ,ವೀರಪ್ಪ ಆವಂಟಿ,ವಿಶ್ವರಾಧ್ಯ ಸತ್ಯಂಪೇಟೆ,ಮಲ್ಲಿಕಾರ್ಜುನ ಸತ್ಯಂಪೇಟೆ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಕ ಮಹಾಸಭಾದ ತಾಲೂಕು ಅಧ್ಯಕ್ಷ ಮಂಜುನಾಥ ಜಾಲಹಳ್ಳಿ,ಅಭಾವೀಲಿಂ ಮಹಾಸಭಾ ಯುವ ಘಟಕದ ತಾಲೂಕು ಅಧ್ಯಕ್ಷ ಶಿವರಾಜ ಕಲಕೇರಿ, ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾಧ್ಯಕ್ಷ ಪ್ರದೀಪ ಕದರಾಪುರ,ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ,ಜಾಗತಿಕ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಶಿವರುದ್ರ ಉಳ್ಳಿ ಸೇರಿದಂತೆ ಸಾವಿರಾರು ಜನ ವೀರಶೈವ ಲಿಂಗಾಯತ ಸಮುದಾಯದ ಜನರು ಹಾಗೂ ವಿವಿಧ ಸಂಘ ಸಂಸ್ಥೆಗಳು ಮುಖಂಡರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಬಸವೇಶ್ವರ ವಾಣಿಜ್ಯ ಮಳಿಗೆಗಳ ಪೂಜೆ ಕಾರ್ಯಕ್ರಮವನ್ನು ನಡೆಸಲಾಯಿತು.

ಬಸವೇಶ್ವರರ ಪುತ್ಥಳಿಯನ್ನು ಪ್ರತಿಷ್ಠಾಪಿಸಲು ಸೋಲಾಪುರ ದಿಂದ ನಗರಕ್ಕೆ ಶನಿವಾರ ರಾತ್ರಿ ಆಗಮಿಸುತ್ತಿದ್ದಂತೆ,ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನ ದಿಂದ ನಗರದ ಪ್ರಮುಖ ಬೀದಿಗಳ ಮೂಲಕ ವೀರಶೈವ ಕಲ್ಯಾಣ ಮಂಟಪದ ವರೆಗೆ ಭವ್ಯವಾದ ಮೆರವಣಿಗೆ ನಡೆಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here