ಕಸಾಪದಿಂದ ಬಸವ ಜಯಂತಿ

0
171

ಕಲಬುರಗಿ: ವಚನ ಸಾಹಿತ್ಯ ಓದಿನ ಜತೆಗೆ ಅದರ ಅನುಷ್ಠಾನ ಬಹಳ ಮುಖ್ಯವಾಗಿದೆ. ಹನ್ನೇರಡನೆಯ ಶತಮಾನದ ಬಸವಾದಿ ಶರಣರು ಕೇವಲ ವಚನಗಳನ್ನು ರಚಿಸಲಿಲ್ಲ. ರಚಿಸಿದಂತೆ ಬಾಳಿ ಬದುಕಿದರು. ಜತೆಗೆ ಕಲ್ಯಾಣ ನಾಡನ್ನು ಕಟ್ಟಿದರು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಹಮ್ಮಿಕೊಂಡ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಾದಿ ಶರಣರು ವಚನ ಸಾಹಿತ್ಯ ರಚಿಸುವ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದಾರೆ. ಪ್ರತಿಯೊಬ್ಬರೂ ಮಾತೃ ಭಾಷಾಭಿಮಾನ ಬೆಳೆಸಿಕೊಂಡಾಗ ಮಾತ್ರ ನಮ್ಮ ಕನ್ನಡ ಭಾಷೆ ಸಮೃದ್ಧವಾಗಿ ಬೆಲೆಯಲು ಸಾಧ್ಯವೆಂದು ಮಾರ್ಮಿಕವಾಗಿ ಮಾತನಾಡಿದರು.

Contact Your\'s Advertisement; 9902492681

ಬಸವ ಜಯಂತಿ ಉತ್ಸವ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಡಾ. ನಾಗವೇಣಿ ಪಾಟೀಲ ಸಮಾರಂಭ ಉದ್ಘಾಟಿಸಿದರು. ಹಿರಿಯ ಸಾಹಿತಿಗಳಾದ ಧರ್ಮಣ್ಣಾ ಹೆಚ್. ಧನ್ನಿ, ಡಾ. ಟಿ.ಭಾಗ್ಯಮ್ಮಾ, ಚಿತ್ರಕಲಾವಿದ ಡಾ. ರೆಹಮಾನ್ ಪಟೇಲ್, ಸಾಹಿತ್ಯ ಪ್ರೇರಕ ಜಗದೀಶ ಮರಪಳ್ಳಿ, ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ಮಾತನಾಡಿದರು.

ಕಸಾಪ ತಾಲೂಕಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ, ಪ್ರಮುಖರಾದ ರಾಜೇಂದ್ರ ಮಾಡಬೂಳ, ಶರಣಬಸಪ್ಪ ನರೂಣಿ, ಬಸ್ವಂತರಾಯ ಕೋಳಕೂರ, ಶರಣಬಸವ ಜಂಗಿನಮಠ, ಪ್ರಭವ ಪಟ್ಟಣಕರ್, ಶಿವಶರಣ ಹಡಪದ, ಉಮೇಶ ಕೋಟನೂರ, ಮಾಲಾ ದಣ್ಣೂರ, ಜ್ಯೋತಿ ಕೋಟನೂರ, ಕವಿತಾ ಕವಳೆ, ರವಿಕುಮಾರ ಶಹಾಪುರಕರ್, ವಿಶ್ವನಾಥ ತೋಟ್ನಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here