ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಯಂತೆ ಮಳೆಗಳು ಆಗುತ್ತವೆ ಎಂಬುವುದು ಹವಾಮಾನ ತಜ್ಞರ ಅಭಿಪ್ರಾಯ. ಆದ್ದರಿಂದ ರೈತರು ಸ್ಥಳೀಯ ಪರಿಸ್ಥಿತಿಗಳನ್ನು ಅವಲೋಕಿಸಿ ಮುಂಗಾರು ಬೆಳೆಗಳ ಯೋಜನೆಯನ್ನು ಹಮ್ಮಿಕೊಳ್ಳುವುದು ಸೂಕ್ತ. ಈಗಾಗಲೇ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಈಗಾಗಲೇ ಪೂರ್ವ ಮುಂಗಾರು ಬಿತ್ತನೆ ಹಲವು ಜಿಲ್ಲೆಯಗಳಲ್ಲಿ ಆರಂಭವಾಗಿದೆ.

ಕೈಗೊಳ್ಳುತ್ತಿದ್ದಾರೆ. ರೈತರು ತಮ್ಮ ಜಮೀನುಗಳಲ್ಲಿ ಕುಂಟೆ-ರಂಟೆಗಳನ್ನು ಹೊಡೆದು ಮಣ್ಣು ಮತ್ತು ನೀರು ಸಂರಕ್ಷಣೆಗಾಗಿ ಚೌಕ ಮಡಿಗಳನ್ನು ಮತ್ತು ದಿಂಡು ಸಾಲುಗಳನ್ನು ಇಳಿಜಾರಿಗೆ ಅಡ್ಡಲಾಗಿ ನಿರ್ಮಿಸುವುದರಿಂದ, ಬಂದ ಮಳೆ ನೀರು ಮಡಿಗಳಲ್ಲಿ ಮತ್ತು ಬೋದುಗಳಲ್ಲಿ ನಿಲ್ಲುವುದರಿಂದ ಮಣ್ಣಿನ ತೇವಾಂಶ ಹೆಚ್ಚು ಸಂಗ್ರಹವಾಗಿ ಮುಂದೆ ಮುಂಗಾರಿನಲ್ಲಿ ಬೆಳೆಯುವ ಬೆಳೆಗಳಿಗೆ ಸಹಕಾರಿಯಾಗುತ್ತದೆ. ಬೆಳೆ ಪರಿವರ್ತನೆ, ಸಾವಯವ ಗೊಬ್ಬರ ಬಳಕೆ, ಸ್ವಚ್ಛ ಸಾಗುವಳಿ ಮತ್ತು ಮಾಗಿ ಉಳುಮೆಯನ್ನು ನೇಗಿಲು ಅಥವಾ ಟ್ರ್ಯಾಕ್ಟರ್ ಸಹಾಯದಿಂದ ಇಳಿಜಾರಿಗೆ ಅಡ್ಡಲಾಗಿ ಉಳುಮೆ ಮಾಡುವುದರಿಂದ ಮಣ್ಣಿನ ಸವಕಳಿ ತಡೆಗಟ್ಟಿ ಸಂರಕ್ಷಿಸಬಹುದು.

ಮಣ್ಣು ಮತ್ತು ನೀರು ಪರೀಕ್ಷೆ ಮಾಡಿಸುವ ಮೂಲಕ ಜಮೀನಿನ ಪೋಷಕಾಂಶಗಳ ಮಟ್ಟವನ್ನು ತಿಳಿಯಬಹುದು. ಸಮಸ್ಯಾ ತಾಂತ್ರಿಕತೆ ಮಣ್ಣುಗಳನ್ನು ಸುಧಾರಿಸಲು ಬಸಿಗಾಲುವೆಗಳನ್ನು ನಿರ್ಮಿಸಿ ಮಣ್ಣಿನ ಗುಣಮಟ್ಟವನ್ನು ಕಾಪಾಡಬಹುದು. ಸತತವಾಗಿ ಕೃಷಿ ವ್ಯವಸ್ಥೆಯಲ್ಲಿ ಉತ್ಪಾದಿಸಲಾಗುತ್ತಿರುವ ಸಸ್ಯಾವಶೇಷಗಳನ್ನು ಭೂಮಿಗೆ ಮರುಕಳಿಸುವುದರಿಂದ ಅಥವಾ ಹೊದಿಕೆ ಮಾಡುವುದರಿಂದ ಮಣ್ಣಿನ ತೆವಾಂಶ ಫಲವತ್ತತೆ ಹಾಗೂ ಉತ್ಪಾದಕತೆಯನ್ನು ಕಾಪಾಡಿಕೊಂಡು ಬರುವುದು. ಮಣ್ಣು ಪರೀಕ್ಷೆ ವರದಿ ಆಧಾರದ ಮೇಲೆ ರೈತರು ಬೆಳೆಗಳಿಗೆ ಸಮತೋಲನ ರಸಗೊಬ್ಬರಗಳನ್ನು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಗೂ ಉತ್ಪಾದಕತೆಯನ್ನು ಅಂದರೆ ಮಣ್ಣಿನ ಆರೋಗ್ಯವನ್ನು ನಿರಂತರವಾಗಿ ಕಾಪಾಡಿಕೊಂಡು ಹೋಗಲು ಸಾಧ್ಯವಾಗುತ್ತದೆ.

ಭೂಮಿಯನ್ನು ಚೆನ್ನಾಗಿ ಹದ ಮಾಡಿದ ನಂತರ ಬಿತ್ತನೆಗೆ 10-15 ದಿವಸಗಳ ಪೂರ್ವದಲ್ಲಿ ಕಾಂಪೋಸ್ಟ್ ಅಥವಾ ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರಗಳನ್ನು ಭೂಮಿಗೆ ಸೇರಿಸಬೇಕು. ಎರಹುಳು ಗೊಬ್ಬರವನ್ನು ಉಪಯೋಗಿಸುವುದಿದ್ದಲ್ಲಿ ಬಿತ್ತನೆಯ ಸಮಯದಲ್ಲಿ ಸಾಲುಗಳಲ್ಲಿ ಹಾಕಿ ವಿವಿಧ ಪ್ರಮಾಣದಲ್ಲಿÀ ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ಪೋಷಕಾಂಶಗಳ ಉಪಯೋಗದ ದಕ್ಷತೆಯು ಹೆಚ್ಚಾಗಿ ಬೆಳೆಯು ಸಮೃದ್ಧಿಯಾಗಿ ಬೆಳೆಯಲು ಅನುಕೂಲವಾಗುವುದರ ಜೊತೆಗೆ ಮಣ್ಣಿನ ಆರೋಗ್ಯವನ್ನೂ ಸಹ ಕಾಪಾಡಿಕೊಳ್ಳಬಹುದು.
ಸಾವಯವ ಕೃಷಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸಾವಯವ ಗೊಬ್ಬರ ತಯಾರಿಸಿಕೊಳ್ಳುವುದು ಒಂದು ಸವಾಲಿನ ಕೆಲಸ.

ಸಾಮಾನ್ಯವಾಗಿ ಸಾವಯವ ವಸ್ತುಗಳು ಸ್ವಾಭಾವಿಕವಾಗಿ ಕಳಿತು ಗೊಬ್ಬರವಾಗಲು 100 ರಿಂದ 120 ದಿನಗಳು ಬೇಕು. ಆದರೆ ವೇಸ್ಟ್ ಡಿ ಕಂಪೋಸರ್ ಬಳಸಿದರೆ 40 ದಿನಗಳಲ್ಲಿ ಗೊಬ್ಬರ ತಯಾರಿಸಬಹುದು. 1 ಎಕರೆಗೆ 200 ಲೀ. ದ್ರಾವಣವನ್ನು ಬಳಸುವುದರಿಂದ ಮಣ್ಣಿನಲ್ಲಿ ಸೂಕ್ಷ್ಮಾಣುಜೀವಿಗಳ ಪ್ರಮಾಣ ವೃದ್ಧಿಯಾಗಿ ಮಣ್ಣು ಫಲವತ್ತಾಗುವುದರ ಜೊತೆಗೆ ಆರೋಗ್ಯ ವೃದ್ದಿಸಬಹುದು.

ಮಳೆ ನೀರು ಕೊಯ್ಲು ಪದ್ದತಿ ಅಳವಡಿಸುವುದು, ಜಮೀನನ್ನು ಸಮತಲಗೊಳಿಸಿ ಹದಗೊಳಿಸುವುದು, ಕೃಷಿಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರಗಳು ಮತ್ತು ಸಾವಯವ ಗೊಬ್ಬರಗಳನ್ನು ಮುಂಚಿತವಾಗಿ ಸಂಗ್ರಹಿಸುವುದು, ಯಂತ್ರೋಪಕರಣಗಳನ್ನು ಬಳಸಲು ಸಿದ್ದತೆ ಮಾಡಿಕೊಳ್ಳುವುದು, ಜಾನುವಾರುಗಳ ಪಾಲನೆ ಮಾಡಲು ಸಿದ್ದತೆ ಕೈಗೊಳ್ಳುವುದು ಬಿತ್ತನೆ ಮತ್ತು ಮೇವಿನ ಬೀಜಗಳ ಲಭ್ಯತೆ, ಕಳೆ, ರೋಗ, ಕೀಟ ಮತ್ತು ನೀರಿನ ನಿರ್ವಹಣೆಗಾಗಿ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ವಿವಿಧ ಬೆಳೆಗಳ ತಂತ್ರಜ್ಞಾನಗಳನ್ನು ವಿಜ್ಞಾನಿಗಳೊಂದಿಗೆ ಚರ್ಚಿಸಿ ಸೂಕ್ತವಾದ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ವೈಜ್ಞಾನಿಕವಾಗಿ ಮತ್ತು ವ್ಯವಸ್ಥಿತವಾಗಿ ಬೇಸಾಯ ಕ್ರಮಗಳನ್ನು ಕೈಗೊಳ್ಳುವುದರಿಂದ ಕಡಿಮೆ ಖರ್ಚು ಮತ್ತು ಹೆಚ್ಚಿನ ಇಳುವರಿಯ ಜೊತೆಗೆ ಉತ್ತಮ ಆದಾಯವನ್ನು ಪಡೆಯಬಹುದು.

ಲೇಖಕರು: ಡಾ. ಶ್ರೀನಿವಾಸ ಬಿ.ವಿ., ಡಾ. ರಾಜು ಜಿ. ತೆಗ್ಗಳ್ಳಿ ಮತ್ತು ಡಾ. ಯುಸುಫ್‍ಅಲಿ ನಿಂಬರಗಿ, ವಿಜ್ಞಾನಿಗಳು,
ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420