ಕಲಬುರಗಿ: ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಹೆಸರನ್ನು ಕರ್ನಾಟಕದಲ್ಲಿ ಬಿಜೆಪಿ ಬಳಸಿಕೊಳ್ಳುವುದರಲ್ಲಿ ತಪ್ಪೇನು? ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನೆ ಮಾಡಿದರು.
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಹಳ ಮಹತ್ವ ಪೂರ್ಣ ಇದೆ. 2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶ ಮಾಡುವ ಗುರಿ ನಮ್ಮದಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅನ್ನೋ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲೂ ಕೂಡ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಾಡಬೇಕಾಗಿದೆ ಎಂದರು.
ಪ್ರಧಾನಿ ಮೋದಿ ಅಭಿವೃದ್ಧಿ ವಿಚಾರದಲ್ಲಿ ಪ್ರತಿ ತಿಂಗಳು ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ವಿಚಾರಿಸುತ್ತಾರೆ. ಕೇಂದ್ರದ ಯೋಜನೆಗಳು ಜಿಲ್ಲೆಯವರೆಗೆ ತಲುಪುತ್ತಿದೆಯಾ ಅಂತ ಜಿಲ್ಲಾಧಿಕಾರಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ. ಬಜೆಟ್ನಲ್ಲಿ ಭದ್ರ ಮೆಲ್ಡಂಡೆ ಯೋಜನೆ ಸಲುವಾಗಿ ಹಣ ನೀಡಲಾಗಿದೆ. ಈ ರೀತಿಯಲ್ಲಿ ಕರ್ನಾಟಕದ ಜೊತೆಗೆ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರಧಾನಿ ಮೋದಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದರು.
ಚುನಾವಣೆಯಲ್ಲಿ ವಿಜೇತರಾದ ಬಳಿಕ ಶಾಸಕರು ಸಿಎಂ ಅವರನ್ನು ಆಯ್ಕೆ ಮಾಡ್ತಾರೆ. ಈಗ ಇರುವ ಸಿಎಂ ಚುನಾವಣೆಗೆ ನಿಂತಿದ್ದಾರೆ. ಚುನಾವಣೆ ಬಳಿಕ ಮುಂದಿನ ಸಿಎಂ ಬಗ್ಗೆ ನೋಡೋಣ. ಕಾಂಗ್ರೆಸ್ ವೀರೆಂದ್ರ ಪಾಟೀಲ್ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿ, ಲಿಂಗಾಯಿತರಿಗೆ ಅಪಮಾನ ಮಾಡಿದೆ. ಅವರಿಗೆ ಲಿಂಗಾಯಿತರ ಬಗ್ಗೆ ಮಾತನಾಡಲು ನೈತಿಕತೆ ಇಲ್ಲಾ ಒಂದೇ ಕುಟುಂಬದ ಗುಲಾಮರಾಗಿರುವ ಕಾಂಗ್ರೆಸ್ಗೆ ಯಾವುದೇ ನೈತಿಕತೆ ಇಲ್ಲ. ಮೋದಿ ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಹೆಸರನ್ನು ಕರ್ನಾಟಕದಲ್ಲಿ ಬಿಜೆಪಿ ಬಳಸಿಕೊಳ್ಳುವುದರಲ್ಲಿ ತಪ್ಪೇನಿದೆ? ಎನ್ನುವ ಮೂಲಕ ಕಾಂಗ್ರೆಸ್ಗೆ ತಿರುಗೇಟು ನೀಡಿದ ನಿರ್ಮಲಾ ಸೀತಾರಾಮನ್, ಯಡಿಯೂರಪ್ಪ ಅವರಿಗೆ ಇವತ್ತಿಗೂ ಕೊಡಬೇಕಾದ ಗೌರವವನ್ನು ನಾವು ಕೊಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕಲಬುರಗಿ ಮಹಾನಗರ ಜಿಲ್ಲಾಧ್ಯಕ್ಷರು ಸಿದ್ದಾಜಿ ಪಾಟೀಲ್, ಕಲಬುರಗಿ ಗ್ರಾಮಾಂತರ ಜಿಲ್ಲಾ ಕಾರ್ಯಾಧ್ಯಕ್ಷರು ಅಶೋಕ್ ಬಗಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರು ಶಶಿಕಲಾ ಟೆಂಗಲಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದಮ್ಮ ಪಾಟೀಲ್, ಕಲಬುರಗಿ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ್ ಬಿರಾದರ್, ಕಲಬುರಗಿ ಮಹಾನಗರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು ಶೋಭಾ ಬಾಗೇವಾಡಿ, ಕಲಬುರಗಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರು ಭಾಗೀರಥಿ ಗುನ್ನಾಪುರ, ಕಲಬುರಗಿ ಮಹಾನಗರ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುವರ್ಣ ವಾಡೆ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…