ಕಲಬುರಗಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು ೩೫೭೦ ಕಿ. ಮೀ ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿಸಿದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂದಿ ಅವರು ಇದೇ ೨೮ ರಂದು ಜೇವರ್ಗಿ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಜೇವರ್ಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ.ಅಜೇಯ ಸಿಂಗ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ರಾತ್ರಿ ೯ ಗಂಟೆಗೆ ಕಲಬುರ್ಗಿಗೆ ಆಗಮಿಸಿ ತಂಗಲಿದ್ದು, ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಜೇವರ್ಗಿ ಪಟ್ಟಣದಲ್ಲಿನ ಎನ್. ಧರ್ಮಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ. ಸಿ ವೇಣುಗೋಪಾಲ, ಡಿಕೆ ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಆಗಮಿಸಲಿದ್ದಾರೆ. ನಂತರ ಕೊಪ್ಪಳದ ಕುಷ್ಟಗಿ ತಾಲೂಕಿನಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ೫ ಗಂಟೆಗೆ ಬಳ್ಳಾರಿಯಲ್ಲಿ ರೋಡ್ ಶೋ ನಲ್ಲಿ ಪಾಲೊಳ್ಳಲಿದ್ದಾರೆ ಎಂದರು.
ಈ ಕಾರ್ಯಕ್ರಮವು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಜರುಗಲಿದೆ. ೪೦ ಪರ್ಸೆಂಟ್ ಭ್ರಷ್ಟ ಸರ್ಕಾರ ಎಂದು ಬಿಜೆಪಿ ಇಡೀ ರಾಷ್ಟçದಲ್ಲಿ ಹೆಸರುವಾಸಿಯಾಗಿದೆ. ಬೆಲೆ ಏರಿಕೆ ನಿರುದ್ಯೋಗ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿವೆ. ಎಲ್ಲ ಕಡೆಯ ಸರ್ವೇಗಳ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಇದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ೧೫೦ ಸ್ಥಾನಗಳಲ್ಲಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯುಪಿಎ ಸರ್ಕಾರವಿದ್ದಾಗ ಗ್ಯಾಸ್ ಬೆಲೆ ರೂ.೪೫೦ ಇತ್ತು. ಆದರೆ ಬಿಜೆಪಿ ಆಡಳಿತದಲ್ಲಿ ರೂ.೧೧೫೦ಕ್ಕೆ ಏರಿಕೆಯಾಗಿದೆ. ಜನರು ಇವರ ಆಡಳಿತದಿಂದ ಬೇಸತ್ತಿದ್ದಾರೆ. ಅಲ್ಲದೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪ್ರತಿ ಮನೆಯ ಯಜಮಾನಿಗೆ ರೂ.೨೦೦೦, ಉಚಿತ ವಿದ್ಯುತ್, ಡಿಪ್ಲೋಮ ವಿದ್ಯಾರ್ಥಿಗಳಿಗೆ ರೂ.೧೫೦೦ ಹಾಗೂ ಯುವನಿದಿ ಯೋಜನೆ ಅಡಿಯಲ್ಲಿ ರೂ.೩೦೦೦ ನಿರುದ್ಯೋಗ ಭತ್ಯೆ ನೀಡುವ ಯೋಜನೆಗಳಾಗಿವೆ ಎಂದರು.
ಈ ಸಮಾವೇಶದಲ್ಲಿ ಜಿಲ್ಲೆಯ ಸುಮಾರು ೫೦ ಸಾವಿರ ಜನರು ಭಾಗಿಯಾಗಲಿದ್ದಾರೆ. ಅಲ್ಲದೇ ಜಿಲ್ಲೆಯ ೯ ಕ್ಷೇತ್ರಗಳ ಅಭ್ಯರ್ಥಿಗಳು ಸೇರಿದಂತೆ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಅಪಾರ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ.- ಶ್ರೀಧರ್ ಬಾಬು, ಕ.ಕ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…