ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿದ ಐತಿಹಾಸಿಕ ನೆಲ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಏ.27 ರಂದು ಆಚರಿಸಲಾಗುತ್ತಿರುವ ಅಂಬೇಡ್ಕರ್ ಜಯಂತಿ ಸಮಾರಂಭಕ್ಕೆ ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಹಾಗೂ ಜೆನ್‍ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯಕುಮಾರ್ ಆಗಮಿಸಲಿದ್ದಾರೆ ಎಂದು ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಮಟೆ, ಅಂಬೇಡ್ಕರ್ ಅವರ ಭೇಟಿಯ ನೆನಪುಗಳನ್ನು ಜೀವಂತವಾಗಿಡಲು ಪ್ರತಿ ವರ್ಷ ವಾಡಿಯಲ್ಲಿ ಏ.27 ಮತ್ತು 28 ರಂದೇ ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ. ಯಾವೂದೇ ಅಡೆತಡೆಗಳು ಎದುರಾದರೂ ಈ ಎರಡು ದಿನಗಳು ಮಾತ್ರ ಬದಲಾಗುವುದಿಲ್ಲ. ಪರಿಣಾಮ ಈ ವರ್ಷ ಏ.27 ರಂದು ಸಂಜೆ 6:00 ಗಂಟೆಗೆ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಏರ್ಪಡಿಸಲಾಗಿರುವ ಬೃಹತ್ ಬಹಿರಂಗ ಸಭೆಗೆ ನಟ ಚೇತನ್ ಹಾಗೂ ಕನ್ಹಯ್ಯಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಬೌದ್ಧ ಭಿಕ್ಷುಗಳಾದ ಧಮ್ಮಾನಂದ ಥೇರೊ, ಭಂತೆ ಜ್ಞಾನಸಾಗರ, ಬೌದ್ಧ ಬಿಕ್ಕುಣಿ ಮಾತಾ ಅರ್ಚಸ್ಮತಿ ಸಾನಿಧ್ಯ ವಹಿಸುವರು.
ಶಾಸಕ ಪ್ರಿಯಾಂಕ್ ಖರ್ಗೆ ಉದ್ಘಾಟಿಸುವರು. ಸಾಹಿತಿ ಬುದ್ಧಘೋಷ ದೇವೇಂದ್ರ ಹೆಗ್ಗಡೆ ಉಪನ್ಯಾಸ ನೀಡುವರು. ದಲಿತ ಸಮುದಾಯದ ಜನಪ್ರತಿನಿಧಿಗಳು ಹಾಗೂ ವಿವಿಧ ಸಮಾಜಗಳ ಅಧ್ಯಕ್ಷರುಗಳು ಅತಿಥಿಗಳಾಗಿ ಪಾಲ್ಗೊಳ್ಳುವರು. ಇದಕ್ಕೂ ಮೊದಲು ಅಶೋಕ ಚಕ್ರ ಮೆರವಣಿಗೆ ನಡೆಯಲಿದೆ. ಏ.28 ರಂದು ಎಂದು ಬೆಳಗ್ಗೆ 10:00 ಗಂಟೆಯಿಂದ ಅಂಬೇಡ್ಕರ್ ಭಾವಚಿತ್ರ ಹಾಗೂ ಬೌದ್ಧ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ ಎಂದರು.
ಬೌದ್ಧ ಸಮಾಜದ ಪ್ರಧಾನ ಕಾರ್ಯದರ್ಶಿ ದೇವಿಂದ್ರ ನಿಂಬರ್ಗಾ, ಮುಖಂಡರಾದ ಮಲ್ಲೇಶಪ್ಪ ಚುಕ್ಕೇರ, ಸತೀಶ ಭಟ್ಟರ್ಕಿ, ಚಂದ್ರಸೇನ ಮೇನಗಾರ, ಶರಣಬಸು ಸಿರೂರಕರ, ಸೂರ್ಯಕಾಂತ ರದ್ದೇವಾಡಿ, ಮಲ್ಲೇಶ ನಾಟೀಕಾರ, ರಮೇಶ ಬಡಿಗೇರ, ಅಮೃತ ಕೋಮಟೆ, ವಿಜಯ ಸಿಂಗೆ, ಚಂದ್ರಶೇಖರ ಧನ್ನೇಕರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…