ಬಿಸಿ ಬಿಸಿ ಸುದ್ದಿ

ಜನರ‌ ನಿರೀಕ್ಷೆ ಹುಸಿಗೊಳಿಸಿದ ಬಿಜೆಪಿ: ದರ್ಶನಾಪುರ

ಶಹಾಪುರ: ಬಿಜೆಪಿ ಸರಕಾರಗಳು ದುರಾಡಳಿತದೊಂದಿಗೆ ಜನರ ನಿರೀಕ್ಷೆಗಳನ್ನು ಹುಸಿಗೊಳಿಸುವ ಮೂಲಕ ಮೋಸ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬರುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ವಿಶ್ವನಾಥರೆಡ್ಡಿ ದರ್ಶನಾಪುರ ಹೇಳಿದರು.

ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಗುರುವಾರ ಬಿಜೆಪಿ-ಜೆಡಿಎಸ್ ಪಕ್ಷ ತೊರೆದು ಹಲವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ಕ್ಷೇತ್ರದಲ್ಲಿ ಐದು ವರ್ಷಗಳ ಕಾಲ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ರಾಜ್ಯದಲ್ಲಿಯೇ ಶಹಾಪುರ ಮಾದರಿ ಕ್ಷೇತವಾಗಿಸಲು ಜನರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಆಶೀರ್ವದಿಸಬೇಕಿದೆ ಎಂದು ಹೇಳಿದರು.

ಮುಡಬೂಳದ ನಮ್ಮ ಪಕ್ಷದ ಹಿರಿಯ‌ ಮುಖಂಡರಾದ ಶಂಕರಗೌಡ ಮಾಲಿಪಾಟೀಲ್ ನೇತೃತ್ವದಲ್ಲಿ ೨೦೦೪ರಲ್ಲಿ ಪಕ್ಷೇತರರಾಗಿ ಎಂಎಲ್ಎ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರಭಾವಿ ಯುವ ಮುಖಂಡ ಹಣಮಂತ್ರಾಯ ಹವಲ್ದಾರ್ ಮುಡಬೂಳ ಮತ್ತು ಅವರ ತಂಡ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದರು.

ಹಿರಿಯ ಮುಖಂಡರಾದ ಶಂಕರಗೌಡ ಮಾಲಿಪಾಟೀಲ್ ಮುಡಬೂಳ, ತಿಮ್ಮಯ್ಯ ಪುರ್ಲೆ, ಕೆಂಚಪ್ಪ ನಗನೂರು, ಬಾಬಾಪುಗೌಡ, ಪಿಡ್ಡನಾಯಕ ದೊರೆ ಸೈದಾಪುರ, ಅನಿಲಕುಮಾರ ಸಾಕರೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಸೇರ್ಪಡೆಗೊಂಡ ಪ್ರಮುಖರು: ಕಾಂಗ್ರೆಸ್ ಮುಖಂಡರಾದ ವಿಶ್ವನಾಥರೆಡ್ಡಿ ದರ್ಶನಾಪುರ ಸಮ್ಮುಖ, ಪಕ್ಷದ ಹಿರಿಯ ಮುಖಂಡ ಶಂಕರಗೌಡ ಮಾಲಿ ಪಾಟೀಲ್ ನೇತ್ರತ್ವದಲ್ಲಿ ಯುವ ಮುಖಂಡ ಹಣಮಂತ್ರಾಯ ಹವಲ್ದಾರ್ ಮುಡಬೂಳ, ಆನಂದ ಹವಲ್ದಾರ್, ದೇವು ನಾಯಕ, ಮಂಜುನಾಥ ಚನ್ನಪಟ್ಟಣ ಸೇರಿದಂತೆ ಹಲವರು ನಾನಾ ಪಕ್ಷಗಳು ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago