ಕಲಬುರಗಿ: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಭ್ರಷ್ಟ ಹಾಗೂ ಕಳ್ಳರ ಸರ್ಕಾರ ಎಂದು ಎಐಸಿಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಜೇವರ್ಗಿ ಪಟ್ಟಣದ ಡಾ. ಧರ್ಮಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಶೇ. 40 ಕಮಿಷನ್ ಸರ್ಕಾರಕ್ಕೆ ಬಹುಶಃ 40 ನಂಬರ್ ಬಹಳ ಪ್ರಿಯವಾಗಿರಬಹುದು ಅಂತ ಕಾಣುತ್ತೆ. ಹೀಗಾಗಿ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 40 ಸ್ಥಾನ ಮಾತ್ರ ತಂದು ಕೊಡಿ ಎಂದರು.
ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಗೆ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಲಭಿಸಲಿದೆ. ಏಕೆಂದರೆ ಜನತೆಯ ಆಶೀರ್ವಾದ ಈ ಬಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
371ನೇ ಕಲಂ ಜಾರಿಗಾಗಿ ಈ ಹಿಂದೆ ಬಿಜೆಪಿಯ ಎಲ್.ಕೆ. ಅಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ವ್ಯಕ್ತಪಡಿಸಿದ್ದರು. ನಮ್ಮ ಸರ್ಕಾರ ಬಂದ ಮೇಲೆ ಸಂವಿಧಾನಕ್ಕೆ ತಿದ್ದುಪಡಿ ತಂದು ಇಡೀ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅನುಕೂಲ ಕಲ್ಪಿಸಲಾಯಿತು. ಇಂಜಿನಿಯರ್ಸ್, ನರ್ಸ್, ಡಾಕ್ಟರ್ ಉದ್ಯೋಗಗಳನ್ನು ಸೃಷ್ಟಿ ಮಾಡಲಾಯಿತು ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಲಾದ 3000 ಕೋಟಿ ರೂ. ಅನುದಾನದಲ್ಲಿ ಶೇ. 12ರಷ್ಟು ಮಾತ್ರ ಬಳಕೆಯಾಗಿರುವುದು ಬಿಜೆಪಿ ಆಡಳಿತದ ವೈಖರಿಗೆ ಹಿಡಿದ ಕನ್ನಡಿಯಾಗಿದೆ. ಖಾಲಿ ಇರುವ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಖಾಲಿ ಇರುವ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಲ್ಲದೆ ಈ ಭಾಗವನ್ನು ವಿಶೇಷ ಶೈಕ್ಷಣಿಕ ವಿಭಾಗವನ್ನಾಗಿಸಲು ಐಐಟಿ, ಐಎಎಂ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕೆಕೆಆರ್ಡಿಬಿಗೆ 5000 ಕೋಟಿ ರೂ. ಅನುದಾನ ನೀಡಲಾಗುವುದು. ಪ್ರತಿ ಗ್ರಾಪಂಗೆ 1 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ, 200 ಯುನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ, ಯುವನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್ ಸಂಚಾರ ಘೋಷಣೆ ಮಾಡಲಾಗಿದ್ದು, ಖಂಡಿತ ಇವು ಗ್ಯಾರಂಟಿ ಯೋಜನೆಗಳು ಎಂದು ವಿವರಿಸಿದರು.
ಕಾಂಗ್ರೆಸ್ ಪಕ್ಷದ ನಮ್ಮ ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ಆದಿಯಾಗಿ ಬಿಜೆಪಿಯವರು ಈ ಯೋಜನೆಗಳನ್ನು ಜಾರಿಗೆ ತರುವುದು ಆಗುವುದಿಲ್ಲ ಎಂದು ಟೀಕಿಸುತ್ತಿದ್ದಾರೆ. ಆದರೆ ಇದು ಅವರಿಗೆ ಅಸಾಧ್ಯವಾದ ಕೆಲಸ. ಯಾಕೆಂದರೆ ಅವರು ಶೇ.40 ಪರ್ಸೆಂಟೇಜ್ ಸರ್ಕಾರ ಎಂದು ಕುಟುಕಿದರು.
ನಮ್ಮಸರ್ಕಾರ ಬಂದರೆ, ಬಡವರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ, ಸಣ್ಣ ವ್ಯಾಪಾರಸ್ಥರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…