ಬಿಸಿ ಬಿಸಿ ಸುದ್ದಿ

ಬಿಜೆಪಿಗರು ಹತಾಶೆ ಗೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಪರ ಜನರು ತಮ್ಮ ಒಲವು‌ ಹೆಚ್ಚಾಗಿ ತೋರಿಸುತ್ತಿರುವುದರಿಂದ ಬಿಜೆಪಿಗರು ಹತಾಶೆರಾಗಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಚಿತ್ತಾಪುರ ತಾಲೂಕಿನ ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಪತ್ರಿಕೆಗಳು ಹಾಗೂ ನ್ಯೂಸ್ ಚಾನೆಲ್ ಗಳು ಮತ್ತು ಸರ್ವೆಗಳು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಯವುದನ್ನು ಸೂಚಿಸುತ್ತಿವೆ. ಇದರಿಂದಾಗಿ ಬಿಜೆಪಿ ಪಕ್ಷದ ನಾಯಕರು ಹತಾಶೆರಾಗಿದ್ದಾರೆ. ಈ ವಾತಾವರಣ ರಾಜ್ಯ ಹಾಗೂ ಚಿತ್ತಾಪುರದಲ್ಲಿ ಇದೆ. ಎನ್ ರವಿಕುಮಾರ ಅವರನ್ನು ಹೊರತುಪಡಿಸಿ
ಬಿಜೆಪಿ ಪರವಾಗಿ ಯಾವ ನಾಯಕರು ಚುನಾವಣೆ ಪ್ರಚಾರಕ್ಕೆ ಹೋಗುತ್ತಿಲ್ಲ ಎಂದರು.

ಬಿಜೆಪಿಗರು ಈ ಹಿಂದೆ ಕಾಂಗ್ರೆಸ್ ಗೆ ಪೈಪೋಟಿ‌ ನೀಡುವಂತ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸುತ್ತಿದ್ದರು ಆದರೆ, ಈ‌ ಸಲ ಎಂತವರಿಗೆ ಟಿಕೇಟ್ ನೀಡಿದಾರೆ, ಅವರ ಹಿನ್ನೆಲೆ ಏನು ಎಂದರೆ ಅಕ್ರಮವಾಗಿ ಅಕ್ಕಿ ಹಾಗೂ ಹಾಲಿನ‌ಪುಡಿಯನ್ನು ಮಾರಾಟ ಮಾಡಿರುವ ಆರೋಪ‌ದ ಮೇಲೆ ಕನಿಷ್ಠ 40 ಕೇಸುಗಳನ್ನು ಹಾಕಿಸಿಕೊಂಡಿದ್ದಾರೆ. ಅಂತವರು ನಿಮ್ಮ ಶಾಸಕರಾಗಬೇಕಾ? ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ‌ ಬಂದರೆ ಐದು ಪ್ರಮುಖ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ ಅವುಗಳಲ್ಲಿ 10 ಕೆಜಿ ಉಚಿತ ಅಕ್ಕಿ ನೀಡುವುದು‌ ಕೂಡಾ ಒಂದಾಗಿದೆ. ಇದರಿಂದ ಬಡ ವರ್ಗದ ಜನರಿಗೆ ಅನುಕೂಲವಾಗಲಿದೆ. ನಮ್ಮ ಜನಪರ ಯೋಜನೆಗಳಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ದೂರಿದರು.

ಚಿತ್ತಾಪುರದ ಪ್ರಗತಿಗಾಗಿ, ವಿದ್ಯಾರ್ಥಿಗಳ, ರೈತರ ಮಹಿಳೆಯರ, ಹಾಗೂ ಸರ್ವಾಂಗೀಣ ಅಭಿವೃದ್ದಿಗೆ ನನಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಲವಾರು ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ತೊರೆದು‌ ಕಾಂಗ್ರೆಸ್ ಪಕ್ಷ‌ ಸೇರ್ಪಡೆಗೊಂಡರು.

ಭಾಗನಗೌಡ ಸಂಕನೂರು, ವೀರನಗೌಡ ಪರಸರೆಡ್ಡಿ, ಗುರು ಪಾಟೀಲ, ಶರಣಗೌಡ‌ ಇಟಗಿ, ಪ್ರಭುಗೌಡ, ಮಲ್ಲನಗೌಡ, ರಾಜೂಗೌಡ, ಸಿದ್ದುಗೌಡ ಅಫಜಲ್ ಪುರ ಸೇರಿದಂತೆ ಹಲವರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

3 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

14 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

14 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

16 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

16 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

16 hours ago