ಶಹಾಬಾದ: ಶಾಸಕರಾಗಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿದರೇ ಬಸವರಾಜ ಮತ್ತಿಮಡು ಅವರ ಗೆಲುವು ಖಚಿತ. ರೇವುನಾಯಕ ಬೆಳಮಗಿ ಅವರ ಸೋಲು ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ಸುನೀಲ ವ್ಲಯಾಪೂರೆ ಹೇಳಿದರು.
ಅವರು ಬಿಜೆಪಿ ಕಾರ್ಯಾಲಯದಲ್ಲಿ ಚುನಾವಣೆಯ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮತ್ತಿಮಡು ಅವರು ಶಾಸಕರಾದ ನಂತರ ಹಿಂದೆದೂ ಕಾಣದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಐದು ವರ್ಷಗಳ ಅವಧಿಯಲ್ಲಿ ಸುಮಾರು 1500ಕೋಟಿಗೂ ಹೆಚ್ಚು ಅನುದಾನ ತಂದು ಕಲಬುರಗಿ ಗ್ರಾಮೀಣ ಮತ ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಈ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಮತ್ತೊಮ್ಮೆ ಸ್ಪಷ್ಟಬಹುಮತ ಪಡೆಯುವ ಮೂಲಕ ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ ವಿಶ್ವಾಸ ವ್ಯಕ್ತಪಡಿಸಿದರು.
ಅಲ್ಲೆ ಪಕ್ಷದ ಕಾರ್ಯಕರ್ತರೆಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಪ್ರಮುಖರ, ಬೂತ ಅಧ್ಯಕ್ಷರ ಮತ್ತು ವಿಶೇಷವಾಗಿ ಪೇಜ ಪ್ರಮುಖರ ಜವಾಬ್ದಾರಿ ಬಗ್ಗೆ ಪರಿಷ್ಕರಿಸಿ ಇನ್ನೂ ಹೆಚ್ಚು ಆಸಕ್ತಿ ವಹಿಸಿ ಕಾರ್ಯ ಮಾಡಲು ಕೇಲವು ಸಲಹೆಗಳನ್ನು ನೀಡಿದರು. ಅಧ್ಯಕ್ಷರಾದ ಅಣವೀರಪ್ಪ ಇಂಗಿನಶೆಟ್ಟಿ, ಪ್ರಮುಖರಾದ ಅರುಣ ಪಟ್ಟಣಕರ ಹಾಗೂ ಕನಕಪ್ಪ ದಂಡಗುಲಕರ ಮಾತನಾಡಿದರು.
ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ಶಕ್ತಿ ಕೇಂದ್ರ ಪ್ರಮುಖರು, ಬೂತಿನ ಪದಾಧಿಕಾರಿಗಳು, ನಗರಸಭೆ ಸದಸ್ಯರು, ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತಿತರಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…