ಕಾಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ಎಪ್ರಿಲ್ 29

0
9

ಶಹಾಬಾದ: ನಗರದ ರಾಯಲ್ ಫಂಕ್ಷನ್ ಹಾಲ್‍ನಲ್ಲಿ ಎಪ್ರಿಲ್ 29 ರಂದು ಸಾಯಂಕಾಲ 4 ಗಂಟೆಗೆ ವಿವಿಧ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕಾರ್ಯಕ್ರಮ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ದುರಾಡಳಿತ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತು ಜನರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಮೆಚ್ಚುವವರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಅವಕಾಶವಿದೆ.

Contact Your\'s Advertisement; 9902492681

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರೇವುನಾಯಕ ಬೆಳಮಗಿ, ಶಿವಾನಂದ ಪಾಟೀಲ ಮರತೂರ, ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here