ಮೊರಾರ್ಜಿ ದೇಸಾಯಿ/ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಆಹ್ವಾನ

0
5

ಕಲಬುರಗಿ; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ (ಆಂಗ್ಲ ಮಾಧ್ಯಮ) ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಸಿ) ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್‍ದಲ್ಲಿ ಆನ್‍ಲೈನ್ ಮೂಲಕ  ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಭಕ್ತಮಾರ್ಕಂಡೇಯ ಅವರು ತಿಳಿಸಿದ್ದಾರೆ.

ಪ್ರವೇಶ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶೇ. 75 ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದ್ದು, ಇದರಲ್ಲಿ ಬಾಲಕಿಯರಿಗೆ ಶೇ. 50 ರಷ್ಟು ಸ್ಥಾನಗಳು ಮೀಸಲಿಡಲಾಗಿದೆ.

Contact Your\'s Advertisement; 9902492681

ಈಗಾಗಲೇ ಏಪ್ರಿಲ್ 27 ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು,        ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ 2023ರ ಮೇ 13 ರಂದು ಕೊನೆಯ ದಿನವಾಗಿದೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು/ ವಿದ್ಯಾರ್ಥಿಗಳ ಪಾಲಕರು, ಸೇವಾ ಸಿಂಧು ಪೋರ್ಟಲ್  https:// sevasindhuservices.karnataka.gov.in ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಉಚಿತ ಸೇವೆ ಪಡೆಯಲು ತಮ್ಮ ಸಮೀಪದ ಅಲ್ಪಸಂಖ್ಯಾತರ ತಾಲೂಕಾ ಮಾಹಿತಿ ಕೇಂದ್ರವನ್ನು ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ https://dom.karnataka.gov.in ವೆಬ್‍ಸೈಟ್‍ನ್ನು, ಸಹಾಯವಾಣಿ 827779990, ಕಲಬುರಗಿಯ ಜಿ.ಡಿ.ಎ. ಕಚೇರಿಯ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ. 08472-247260ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here