ಕಲಬುರಗಿ; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ (ಆಂಗ್ಲ ಮಾಧ್ಯಮ) ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಸಿ) ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಭಕ್ತಮಾರ್ಕಂಡೇಯ ಅವರು ತಿಳಿಸಿದ್ದಾರೆ.
ಪ್ರವೇಶ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶೇ. 75 ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದ್ದು, ಇದರಲ್ಲಿ ಬಾಲಕಿಯರಿಗೆ ಶೇ. 50 ರಷ್ಟು ಸ್ಥಾನಗಳು ಮೀಸಲಿಡಲಾಗಿದೆ.
ಈಗಾಗಲೇ ಏಪ್ರಿಲ್ 27 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ 2023ರ ಮೇ 13 ರಂದು ಕೊನೆಯ ದಿನವಾಗಿದೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು/ ವಿದ್ಯಾರ್ಥಿಗಳ ಪಾಲಕರು, ಸೇವಾ ಸಿಂಧು ಪೋರ್ಟಲ್ https:// sevasindhuservices.karnataka.gov.in ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಉಚಿತ ಸೇವೆ ಪಡೆಯಲು ತಮ್ಮ ಸಮೀಪದ ಅಲ್ಪಸಂಖ್ಯಾತರ ತಾಲೂಕಾ ಮಾಹಿತಿ ಕೇಂದ್ರವನ್ನು ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ https://dom.karnataka.gov.in ವೆಬ್ಸೈಟ್ನ್ನು, ಸಹಾಯವಾಣಿ 827779990, ಕಲಬುರಗಿಯ ಜಿ.ಡಿ.ಎ. ಕಚೇರಿಯ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ. 08472-247260ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…