ಮತದಾನ ದಿನದಂದು ಎಲ್ಲಾ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸೂಚನೆ

0
7

ಕಲಬುರಗಿ; ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10 ಮತದಾನ ನಡೆಯಲಿದೆ. ಮತದಾನ ದಿನದಂದು ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿ, ವಾಣಿಜ್ಯ ಸಂಸ್ಥೆಗಳು, ಹೊಟೇಲ್‍ಗಳು, ಚಿತ್ರಮಂದಿರಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳನ್ನು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ರ ಪ್ರಕಾರ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಸಹಿತ ರಜೆ ನೀಡಿ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕೆಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳಾದ ರಮೇಶ ಸುಂಬಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅದೇ ರೀತಿ ಮತದಾನ ನಡೆಯಲಿರುವ ವ್ಯಾಪ್ತಿಯಲ್ಲಿ ನೋಂದಾಯಿತ ಅರ್ಹ ಕಾರ್ಮಿಕರಿಗೆ ಮತದಾನ ದಿನದಂದು ಮತ ಚಲಾಯಿಸಲು ಅನುಕೂಲವಾಗುವಂತೆ ಮಾಲೀಕರು ವೇತನ ಸಹಿತ ರಜೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.

Contact Your\'s Advertisement; 9902492681

ಮತದಾನ ದಿನದಂದು ಕಾರ್ಮಿಕರಿಗೆ ಮತ ಚಲಾಯಿಸಲು ವೇತನ ಸಹಿತ ರಜೆ ನೀಡಿ, ಕಾರ್ಮಿಕರು ಮತವನ್ನು ಚಲಾಯಿಸಲು ಸಂಸ್ಥೆಯ ಮಾಲೀಕರು ಅನುವು ಮಾಡಿಕೊಡಬೇಕು ಹಾಗೂ ಮತ ಚಲಾಯಿಸಲು ಕಾರ್ಮಿಕರಿಗೆ ಪ್ರೋತ್ಸಾಹಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here