ಸ್ವೀಪ್ ಜಾಗೃತಿ: ವಿಧಾನಸೌಧದಲ್ಲಿ ರಂಗೋಲಿ ಕಲರವ, ಮೆಹಂದಿ ಸಿಂಗಾರ

ಕಲಬುರಗಿ: ಮತದಾನದ ಮಹತ್ವ ಸಾರುವ ಎಲ್ಲೆಡೆ ಬಣ್ಣ-ಬಣ್ಣದ ರಂಗೋಲಿಗಳ ಚಿತ್ತಾರ, ಮತದಾನ ಪ್ರತಿಜ್ಞೆ ಪ್ರತಿರೂಪದ ಹಸ್ತಾಕ್ಷರ, ಕಲಾ ತಂಡಗಳ ಕಲಾ ಪ್ರದರ್ಶನ, ಮಹಿಳೆಯರಿಗೆ ಮೆಹಿಂದಿ ಸಿಂಗಾರ. ಇದೆಲ್ಲವು ಭಾನುವಾರ ಇಲ್ಲಿನ ಮಿನಿ ವಿಧಾನಸೌಧದ ಅವರಣದಲ್ಲಿ ಕಂಡುಬಂದಿದ್ದು.

ಹೌದು, ಮತದಾನ ಪ್ರಮಾಣ ಹೆಚ್ಚಿಸಲು ಭಾರತ ಚುನಾವಣಾ ಆಯೋಗವು ಏ.29 ಮತ್ತು 30 ರಂದು ಎರಡು ದಿನದ ವಿಶೇಷ ಜಾಗೃತಿ ಅಭಿಯಾನಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿಯು ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳಿವು.

ವಿಧಾನಸೌಧದ ಆವರಣದೆಲ್ಲದೆ ಚುನಾವಣಾ ಆಯೋಗದ ಲೋಗೊ, ಮತದಾನ, ಇ.ವಿ.ಎಂ. ಯಂತ್ರ, ಮೇ 10ಕ್ಕೆ ಮತದಾನ ಮಾಡಿ, ಕಡ್ಡಾಯವಾಗಿ ಮತ ಚಲಾಯಿಸಿ ಹೀಗೆ ಎಲ್ಲವು ಬಣ್ಣ – ಬಣ್ಣದ ರಂಗೋಲಿಯಲ್ಲಿ ಮೂಡಿಬಂದವು. ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಅವರು ಎಲ್ಲವನ್ನು ಕುತೂಹಲದಿಂದ ವೀಕ್ಷಿಸಿ, ಸ್ವೀಪ್ ಜಾಗೃತಿಗೆ ಕೈಜೋಡಿಸಿದವರಿಗೆ ಧನ್ಯವಾದ ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಮತದಾನದ ಕುರಿತು ಜನಜಾಗೃತಿ ಮೂಡಿಸಲು ಸಿದ್ಧಗೊಂಡಿರುವ ಬೀದಿ ನಾಟಕ ಜಾಗೃತಿ ಜಾಥಾಗೆ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಚಾಲನೆ ನೀಡಿದರು.

ಮೆಹಂದಿ ರಂಗು: ಸ್ವೀಪ್ ಜಾಗೃತಿ ಕಾರ್ಯಕ್ರಮಕ್ಕೆ ಆಗಮಿಸಿದ ಮಹಿಳೆಯರಿಗೆ ಶಾಲಾ -ಕಾಲೇಜು ವಿದ್ಯಾರ್ಥಿನಿಯರು ವಿವಿಧ ವಿನ್ಯಾಸದ ಮೆಹಂದಿ ಬಿಡಿಸಿದರು. ಮೆಹಂದಿ ಹಾಕಿಸಿಕೊಂಡವರು ಹಾಗೆ ನಗೆ ಚೆಲ್ಲಿದರು.

ಸಹಿ ಅಭಿಯಾನ: ಮತದಾನ ಮಾಡುವ ಕುರಿತು ಸಹಿ ಅಭಿಯಾನ ಸಹ ಆಯೋಜಿಸಿತ್ತು. ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಅವರು ಆರಂಭದಲ್ಲಿ ತಮ್ಮ ಹಸ್ತಾಕ್ಷರ ಹಾಕುವ ಮೂಲಕ ಇದಕ್ಕೆ ಚಾಲನೆ ನೀಡಿದರು. ಅವರೊಂದಿಗಿದ್ದ ಇತರೆ ಅಧಿಕಾರಿಗಳು ಇದನ್ನೆ ಪಾಲಿಸಿದರು.

ಚಂಪಾ ಕ್ರೀಡಾಂಗಣದಲ್ಲಿ ಡಿ.ಸಿ.ಯಿಂದ ಪ್ರತಿಜ್ಞೆ ವಿಧಿ ಬೋಧನೆ: ಶಾಲಾ-ಕಾಲೇಜು, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮತದಾನ ಕುರಿತು ಜಾಗೃತಿ ಜಾಥಾವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ವರೆಗೆ ಕಲಾ ತಂಡಗಳೊಂದಿಗೆ ನಡೆಯಿತು. ಚಂಪಾ ಕ್ರೀಡಾಂಗಣದಲ್ಲಿ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಡ್ರೋನ್ ಕ್ಯಾಮೆರಾನಲ್ಲಿ ಕಾಣುವ ಹಾಗೆ 10th May Vote, 10th May Sveep ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಡಿ.ಎಚ್.ಓ. ಡಾ.ರಾಜಶೇಖರ ಮಾಲಿ ಪಾಟೀಲ, ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ, ಆಯುμï ಉಪನಿರ್ದೇಶಕಿ ಡಾ.ಗಿರೀಜಾ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗ್ರಾಮೀಣ ಕೈಗಾರಿಕೆ) ಉಪನಿರ್ದೇಶಕ ಅಬ್ದುಲ್ ಅಜೀಮ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ ಸೇರಿದಂತೆ ವಿವಿಧ ಇಲಾಖೆಯ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು, ವಿಶೇಷಚೇತನರು, ಶಾಲಾ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420