ಬಿಸಿ ಬಿಸಿ ಸುದ್ದಿ

ಬಿಜೆಪಿ ಅಧಿಕಾರಕ್ಕೆ ತರಲು ಮತ್ತಿಮಡುಗೆ ಬಹುಮತದಿಂದ ಗೆಲ್ಲಿಸಿ

ಶಹಾಬಾದ: ರಾಷ್ಟ್ರೀಯವಾದಿ ಚಿಂತನೆಯ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಕಟಿಬದ್ಧವಾಗಿರುವ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಲು ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರಲು ಬಸವರಾಜ ಮತ್ತಿಮಡು ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದು ಜಾಖರ್ಂಡನ ಸಂಸದ ಹಾಗೂ ಚುನಾವಣಾ ಉಸ್ತುವಾರಿ ಸುನೀಲಸಿಂಗ್ ಹೇಳಿದರು.

ಅವರು ಶಹಾಬಾದ ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿ, ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮಡು ಪರವಾಗಿ ಕ್ಷೇತ್ರದಲ್ಲಿ ಮತಯಾಚನೆ ಮಾಡಿದರು.

2024ರ ಲೋಕಸಭಾ ಚುನಾವಣೆಗೆ ಈ ಬಾರಿಯ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದ್ದು, ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಂದರ್ಭದಲ್ಲಿ ಮತ್ತೊಮ್ಮೆ ಡಬಲ್ ಇಂಜಿನ್ ಸರಕಾರ ದೇಶ ಹಾಗೂ ರಾಜ್ಯದಲ್ಲಿ ಜನಪರ ಆಡಳಿತ ನೀಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಆಶಾಕಿರಣ, ಅಭಿವೃದ್ಧಿಗಾಗಿ ಬಿಜೆಪಿಯನ್ನು ಗೆಲ್ಲಿಸಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ ಎಂದು ಇವರುಗಳು ಮನವಿ ಮಾಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಅರುಣ ಹೂಗಾರ, ಜ್ಯೋತಿ ಶರ್ಮ,ಅಭಿನಂದ ಪಾಟೀಲ, ಬಂಡಪ್ಪ ಚಿಂಚೊಳಿ, ಅಭಿμÉೀಕ , ವಿಜಯಕುಮಾರ್ ಇದ್ದರು.

ನಗರದ ನೆಹರು ಚೌಕದಿಂದ ಶಾಸ್ತ್ರಿ ಚೌಕವರೆಗೆ ಮೆನರೋಡನಲ್ಲಿ ರೊಡಶೊ ಮಾಡಿ ಕರಪತ್ರಗಳನ್ನು ಹಂಚಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಂಡಲ ಪದಾಧಿಕಾರಿಗಳು, ಪ್ರಮುಖರು, ನಗರಸಭೆ ಸದಸ್ಯರು, ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ಶಕ್ತಿ ಕೇಂದ್ರದ ಪ್ರಮುಖರು, ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

11 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

22 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

22 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 day ago