ವಿಶೇಷ ರೀತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ; ತೇಗಲತಿಪ್ಪಿ

0
207

ಕಲಬುರಗಿ: ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ 109 ನೇ ಸಂಸ್ಥಾಪನಾ ದಿನಾಚರಣೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ಭಾಗದ 109 ಜನ ಹಿರಿಯ ಮತ್ತು ಯುವ ಲೇಖಕರ ಪುಸ್ತಕಗಳ ಪ್ರದರ್ಶನ ಹಾಗೂ ಪರಿಷತ್ತಿನ 109 ಜನ ಹಿರಿಯ ಸದಸ್ಯರಿಗೆ ಸತ್ಕಾರವನ್ನೊಳಗೊಂಡ ಸಾಹಿತ್ಯ-ಪುಸ್ತಕೋತ್ಸವದ ಸಂಭ್ರಮವನ್ನು ಮೇ 5 ರಂದು ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ತೇಗಲತಿಪ್ಪಿ, ಕನ್ನಡ ನಾಡು-ನುಡಿ ಮತ್ತು ಸಂಸ್ಕøತಿಯ ಬೆಳವಣಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನದೇ ಆದ ಪಾತ್ರವನ್ನು ನಿರ್ವಹಿಸುತ್ತಾ ಬಂದಿದೆ. ಕನ್ನಡಿಗರ ಮನ ಮತ್ತು ಮನೆಗಳಲ್ಲಿ ಕನ್ನಡದ ಪ್ರಜ್ಞೆಯನ್ನು ಮೂಡಿಸುವಲ್ಲಿ ಪರಿಷತ್ತು ಮಹತ್ವದ ಸಾಧನೆ ಮಾಡಿದೆ ಎಂದು ಅವರು ವಿವರಿಸಿದರು.

Contact Your\'s Advertisement; 9902492681

ಕನ್ನಡ ಭಾಷೆ, ಸಂಸ್ಕøತಿ ಉಳಿವಿಗೆ ವಿಶೇಷ ಕೊಡುಗೆ ಕೊಟ್ಟ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಈ ಬಾರಿ ವಿಶೇಷ ಹಾಗೂ ಅಪರೂಪದ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ.

ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಇಟ್ಟುಕೊಂಡಿರುವ ಕೋಟಿ ಸದಸ್ಯತ್ವ ಅಭಿಯಾನದ ಗುರಿಯನ್ನು ತಲುಪಲು ಅವರ ಕೈ ಬಲ ಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲೂ ಅತೀ ಹೆಚ್ಚು ಕಸಾಪ ಸದಸ್ಯರನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ.

ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಜಿಲ್ಲೆಗೆ ತಮ್ಮದೇ ಆದ ರೀತಿಯಲ್ಲಿ ವಿಶೇಷ ಕೊಡುಗೆ ನೀಡಿರುವ ಮಾಜಿ ಜಿಲ್ಲಾಧ್ಯಕ್ಷರಾದ ಪಿ.ಎಂ.ಮಣ್ಣೂರ, ಡಾ. ಎಂ.ಎಸ್.ಪಾಟೀಲ, ಅಪ್ಪಾರಾವ ಅಕ್ಕೋಣೆ, ವೀರಭದ್ರ ಸಿಂಪಿ, ಮಹಿಪಾಲರೆಡ್ಡಿ ಮುನ್ನೂರ ಅವರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಗುತ್ತಿದೆ.

ಚಲನಚಿತ್ರ ನಟ ಹಾಗೂ ಹಿರಿಯ ಲೇಖಕ ಸಂಗಮೇಶ ಉಪಾಸೆ ಸಮಾರಂಭವನ್ನು ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕಥೆಗಾರ ಸಿದ್ಧರಾಮ ಹೊನ್ಕಲ್, ಹಿರಿಯ ಚಿತ್ರಕಲಾವಿದ ಬಸವರಾಜ ಜಾನೆ, ಹಿರಿಯ ಲೇಖಕಿ ಪ್ರಮೀಳಾ ಜಾನಪ್ಪಗೌಡ, ರಂಗಭೂಮಿ ಕಲಾವಿದ ನಾರಾಯಣ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕಸಾಪ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ: ಕಡ್ಡಾಯ ಮತದಾನ ಮತ್ತು ನೈತಿಕ ಮತದಾನ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂಬ ಸಂದೇಶವನ್ನು ಹೊತ್ತ ಕವಿತೆಯನ್ನು ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಮತದಾನ ಜಾಗೃತಿ ಮೂಡಿಸಿ ಭಯವಿಲ್ಲದೇ ಮತ್ತು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಬೇಕು ಎಂಬ ಸಾಮಾಜಿಕ ಜಾಗೃತಿ ಮೂಡಿಸುವ ಈ ಪ್ರಯೋಗ ಗಮನ ಸೆಳೆಯುವಂತಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪದಾಧಿಕಾರಿಗಳಾದ ರಾದ ಸಿದ್ಧಲಿಂಗ ಬಾಳಿ, ರಾಜೇಂದ್ರ ಮಾಡಬೂಳ, ಎಸ್.ಎಂ.ಪಟ್ಟಣಕರ್ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here