ಕಲಬುರಗಿ: ರಾಜ್ಯ ಸರ್ಕಾರ ಅಭಿವೃದ್ದಿ ಕಾರ್ಯ ಕೈಗೊಳ್ಳುವಲ್ಲಿ ವಿಫಲವಾಗಿದ್ದು, ಭ್ರಷ್ಟಾಚಾರ ತಾರಕ್ಕಕ್ಕೇರಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಸಂಕನೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದ ಅವರು ಗಂಗಾ ಕಲ್ಯಾಣ ಯೋಜನೆಯಲ್ಲಿ ಬಿಜೆಪಿ ಸರ್ಕಾರ ಬಡವರ ಜಮೀನುಗಳಲ್ಲಿ ಬೋರ್ ವೆಲ್ ಕೊರೆಸುವ ಬದಲು ಸುಮಾರು 500 ಕೋಟಿ ಅವ್ಯವಹಾರ ಮಾಡಿದೆ. ಭ್ರಷ್ಟಾಚಾರಕ್ಕೆ ತೀಲಾಂಜಲಿ ಇಡಬೇಕಾದರೆ ನೀವೆಲ್ಲ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಬರಲಿದೆ ಪ್ರಗತಿ ತರಲಿದೆ ಎಂದು ಘೋಷಿಸಿದ ಪ್ರಿಯಾಂಕ್ ಖರ್ಗೆ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಅವನು ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆ. ಅಂತವನನ್ನು ಬಿಜೆಪಿ ಶಾಸಕನನ್ನಾಗಿ ಮಾಡ ಹೊರಟಿದೆ. ನೀವೆಲ್ಲ ಸೇರಿ ಅವರಿಗೆ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.
ವೇದಿಕೆಯ ಮೇಲೆ ಭಾಗನಗೌಡ ಸಂಕನೂರು, ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ ಸೇರಿದಂತೆ ಹಲವರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…